Daily Horoscope
✕

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 29 ಜೂನ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಭವಿಷ್ಯದ ದೃಷ್ಟಿಯಿಂದ ಕೆಲವು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಯಶಸ್ಸು ಕಾಣಲಿದ್ದೀರಿ. ಮಹಿಳೆಯರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ.

ವೃಷಭ: ಅತಿಯಾಗಿ ಇನ್ನೊಬ್ಬರ ಬಗ್ಗೆ ಯೋಚನೆ, ನಕಾರಾತ್ಮಕ ಯೋಚನೆಗಳು ಮನಸ್ಸನ್ನು ಕಾಡಲಿದೆ. ಮನಸ್ಸಿನ ನೆಮ್ಮದಿಗಾಗಿ ಇಷ್ಟದೇವರ ಮೊರೆ ಹೋಗಲಿದ್ದೀರಿ. ಗುರುಹಿರಿಯರ ಸಲಹೆ ಪಡೆಯಲಿದ್ದೀರಿ.

ಮಿಥುನ: ದೈಹಿಕ ನೋವು, ಗಾಯ ಇತ್ಯಾದಿಗಳಾಗುವ ಸಾಧ‍್ಯತೆ. ಕುಟುಂಬ ಸದಸ್ಯರ ಸಹಕಾರ ಮನಸ್ಸಿಗೆ ನೆಮ್ಮದಿ ಕೊಡಲಿದೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಗೆಲುವು. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಆಪ್ತರ ಮನೆಗೆ ಭೇಟಿ ನೀಡುವ ಸಾಧ‍್ಯತೆ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳಿಂದ ತೊಂದರೆ ಕಂಡುಬಂದೀತು. ತಾಳ್ಮೆಯಿರಲಿ.

ಸಿಂಹ: ನಿಮ್ಮ ಪ್ರೀತಿ ಪಾತ್ರರಿಂದ ಅನಿರೀಕ್ಷಿತ ಉಡುಗೊರೆಗಳನ್ನು ಪಡೆಯಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕನ್ಯಾ: ನೆರೆಹೊರೆಯವರ ಕಷ್ಟಗಳಿಗೆ ಹೆಗಲು ಕೊಡಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಕ್ಕಳ ನಿಮಿತ್ತ ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ತುಲಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹೊಸದಾಗಿ ಆರಂಭಿಸಿದ್ದ ವ್ಯವಹಾರಗಳಿಂದ ಲಾಭ ಪಡೆಯಲಿದ್ದೀರಿ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ನಿಮಗೆ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಪಾಲುಬಂಡವಾಳ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಹಣಕಾಸಿನ ಪರಿಸ್ಥಿತಿಗಳು ಸುಧಾರಿಸಲಿವೆ. ಚಿಂತೆ ಬೇಡ.

ಧನು: ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಸ್ವಯಂ ವೃತ್ತಿಯವರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಮಕರ: ಸಭೆ, ಸಮಾರಂಭಗಳಲ್ಲಿ ಭಾಗಿಯಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕಲಾರಂಗದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಉದ್ಯೋಗ ಸಂಬಂಧವಾಗಿ ಪರವೂರಿಗೆ ಪ್ರಯಾಣಿಸುವ ಸಾಧ‍್ಯತೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಸಂಗಾತಿಯ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ದಿನದಂತ್ಯಕ್ಕೆ ವಿಶೇಷ ಸುದ್ದಿ ಕೇಳಿಬರಲಿದೆ.

ಮೀನ: ಯಾವುದೇ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವದು ಉತ್ತಮ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನವರಾತ್ರಿ ಸಂದರ್ಭದಲ್ಲಿ ತಪ್ಪದೇ ಅಷ್ಟಾದಶ ಶಕ್ತಿಪೀಠ ಸ್ತೋತ್ರಮ್ ಪಠಿಸಿ

ಶ್ರೀ ಸುದರ್ಶನ ಚಕ್ರ ಸ್ತೋತ್ರಂ ಗರುಡಪುರಾಣೋಕ್ತಂ

ಶ್ರೀ ಬಗಳಾಮುಖೀ ಕವಚ ಸ್ತೋತ್ರ ಮತ್ತು ಪಠಣದ ಲಾಭಗಳು

ಪಂಚಮುಖ ಹನುಮತ್ಕವಚ ಸ್ತೋತ್ರಂ ಓದುವುದರ ಫಲ ತಿಳಿದರೆ ತಪ್ಪದೇ ಓದುತ್ತೀರಿ

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments