ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 16 ಜುಲೈ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಅವಕಾಶ ದೊರೆಯುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ.

ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕರ್ಕಟಕ: ಮಾತು ಕಡಿಮೆ ಮಾಡಿ ಕೆಲಸದ ಕಡೆಗೆ ಹೆಚ್ಚು ಗಮನ ಕೊಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಚಿಂತೆ ಬೇಡ.

ಸಿಂಹ: ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆಗೆ ಭಂಗವಾದೀತು. ಸಾಂಸಾರಿಕವಾಗಿ ಕಷ್ಟ-ನಷ್ಟಗಳು ಸಹಜ. ನೆರೆಹೊರೆಯವರಿಗೆ ನಿಮ್ಮಿಂದ ಉಪಕಾರವಾಗಲಿದೆ.

ಕನ್ಯಾ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದಲ್ಲಿ ಆರೋಗ್ಯ ಸಮಸ್ಯೆಯಾದೀತು. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ.

ತುಲಾ: ಅಧ್ಯಾಪನ ವೃತ್ತಿಯಲ್ಲಿರುವವರು ವೃತ್ತಿ ಸಂಬಂಧವಾದ ತಯಾರಿ ನಡೆಸಿಕೊಳ್ಳಲಿದ್ದಾರೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಬಂಧು ಮಿತ್ರರ ಭೇಟಿ ಯೋಗ.

ವೃಶ್ಚಿಕ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಹಿರಿಯರ ಜೊತೆ ಸಮಾಲೋಚನೆ ನಡೆಸುವುದು ಉತ್ತಮ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಸರಕಾರೀ ನೌಕರರಿಗೆ ಬಿಡುವಿನ ದಿನದ ಸಂತೋಷ ಸಿಗಲಿದೆ.

ಧನು: ವೃತ್ತಿ ಸಂಬಂಧವಾದ ಚಿಂತೆಗಳನ್ನು ಮನೆಯವರ ಮುಂದೆ ತೋರ್ಪಡಿಸಲು ಹೋಗಬೇಡಿ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಭಾಗ್ಯ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ದಿನ ಕಾಯುವುದು ಉತ್ತಮ. ಸಾಲಗಾರರ ಕಾಟದಿಂದ ಮುಕ್ತಿ ಸಿಗವುದು. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕುಂಭ: ಸಾಕು ಪ್ರಾಣಿಗಳನ್ನು ಮನೆಗೆ ತರಲಿದ್ದೀರಿ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಮನೆಯವರೊಂದಿಗೆ ಯೋಚಿಸಿ ಹೆಜ್ಜೆಯಿಡುವುದು ಸೂಕ್ತ. ಇನ್ನೊಬ್ಬರಿಗೆ ಸಹಾಯ ಮಾಡುವ ಮುನ್ನ ಪೂರ್ಪಾಪರ ತಿಳಿದು ಮುಂದುವರಿಯಿರಿ. ದೇವಾಲಯ ಸಂದರ್ಶಿಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಶಿವ ಷಡಕ್ಷರೀ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಜ್ಯೋತಿಷ್ಯ ಪ್ರಕಾರ ಮಕರ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments