ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಮಂಗಳವಾರ, 2 ಜುಲೈ 2019 (08:53 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಅನ್ಯರ ಏಳಿಗೆ ಕಂಡು ಸಂತೋಷಪಡುವ ಮನಸ್ಥಿತಿ ಬೆಳೆಸಿಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೀಳರಿಮೆಯಿಂದಾಗಿ ಕಷ್ಟಕ್ಕೆ ಸಿಲುಕುವಿರಿ. ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರುವುದು.

ವೃಷಭ: ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಮಕ್ಕಳಿಂದ ಮನಸ್ಸಿಗೆ ನೋವಾಗುವ ಘಟನೆಗಳು ನಡೆಯಲಿವೆ. ತಾಳ್ಮೆಯಿಂದಿರುವುದು ಮುಖ್ಯ. ಆರ್ಥಿಕವಾಗಿ ಪರಿಸ್ಥಿತಿ ಸುಧಾರಣೆಯಾಗಲಿದೆ.

ಮಿಥುನ: ನಿರುದ್ಯೋಗಿಗಳು ಸ್ವಂತ ಉದ್ಯೋಗ ಮಾಡುವುದರ ಕುರಿತು ಚಿಂತನೆ ನಡೆಸಲಿದ್ದಾರೆ. ಗೃಹೋಪಯೋಗಿ ವಸ್ತುಗಳಿಗಾಗಿ ಧನವಿಯೋಗ ಮಾಡುವಿರಿ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಕರ್ಕಟಕ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ ಎಂಬುದನ್ನು ಮನಗಾಣಿರಿ. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸುವಿರಿ. ಆದಾಯವಿದ್ದಷ್ಟೇ ಖರ್ಚೂ ಮಾಡುವಿರಿ.

ಸಿಂಹ: ಕೌಟುಂಬಿಕವಾಗಿ ನಿಮ್ಮ ಜವಾಬ್ಧಾರಿಗಳು ಹೆಚ್ಚಲಿವೆ. ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ನೂತನ ದಂಪತಿಗೆ ಮಧುಚಂದ್ರ ಭಾಗ್ಯವಿದೆ.

ಕನ್ಯಾ: ದೇವತಾ ದರ್ಶನ ಮಾಡುವಿರಿ. ಆಸ್ತಿ ವಿಚಾರದಲ್ಲಿ ದಾಯಾದಿಗಳೊಂದಿಗಿನ ಕಲಹವನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಆಕಸ್ಮಿಕವಾಗಿ ಧನ ಲಾಭವಾಗಲಿದೆ.

ತುಲಾ: ಇಷ್ಟ ಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ್ಯತೆಯಿದೆ. ವಾಹನ ಸವಾರರು ಎಚ್ಚರಿಕೆಯಿಂದಿರಬೇಕು. ಹೊಸ ವ್ಯವಹಾರಗಳಿಗೆ ಕೈ ಹಾಕುವಾಗ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬಂದೀತು. ಅಂದುಕೊಂಡ ಕಾರ್ಯಗಳಿಗೆ ಅನಿರೀಕ್ಷಿತ ವಿಘ್ನಗಳು ಎದುರಾಗಲಿವೆ. ಕುಲದೇವರ ಪ್ರಾರ್ಥನೆ ಮಾಡಿ ಮುಂದುವರಿಯಿರಿ. ದಿನದಂತ್ಯದಲ್ಲಿ ಶುಭ ಸುದ್ದಿ.

ಧನು: ಗೃಹ ಕೃತ್ಯಗಳಲ್ಲಿ ಸಂಗಾತಿಗೆ ಸಹಕಾರ ನೀಡಬೇಕಾಗುತ್ತದೆ. ದುಡುಕು ನಿರ್ಧಾರ ಕೈಗೊಳ್ಳಬೇಡಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ನಡೆಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ.

ಮಕರ: ಆತ್ಮೀಯರ ಕಷ್ಟ ಕಾರ್ಪಣ್ಯಗಳಿಗೆ ಕಿವಿಗೊಡುವಿರಿ. ಅನವಶ್ಯಕ ವಿವಾದಗಳಿಂದ ದೂರವಿದ್ದರೇ ಒಳ್ಳೆಯದು. ಅನಿರೀಕ್ಷಿತವಾಗಿ ಮನೆಗೆ ನೆಂಟರ ಆಗಮನವಾಗಲಿದೆ. ಖರ್ಚಿನ ಬಗ್ಗೆ ಹಿಡಿತವಿರಲಿ.

ಕುಂಭ: ಅಪರಿಚಿತರನ್ನು ಹೊಸ ವ್ಯವಹಾರಕ್ಕೆ ಕೈ ಹಾಕಬೇಡಿ. ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ನಿಮ್ಮ ಹಿತ ಮಿತವಾದ ಮಾತಿನಿಂದಲೇ ಹಿರಿಯರ ಮನ ಗೆಲ್ಲಬೇಕು.

ಮೀನ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಆದರೆ ಕಷ್ಟದ ಸಮಯದಲ್ಲಿ ಸಂಗಾತಿಯ ಸಮಯೋಚಿತ ಸಲಹೆ ಉಪಯೋಗಕ್ಕೆ ಬರುವುದು. ಆರ್ಥಿಕವಾಗಿ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಗೋಚರವಾಗಲಿದೆ. ಉಪಯೋಗಿಸುವ ಜಾಣತನ ಬೇಕು ಅಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments