Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಾಳೆಹಣ್ಣಿನ ಸಿಪ್ಪೆ ಬಿಸಾಡುವ ಮೊದಲು ಯೋಚಿಸಿ

ಬಾಳೆಹಣ್ಣಿನ ಸಿಪ್ಪೆ ಬಿಸಾಡುವ ಮೊದಲು ಯೋಚಿಸಿ
ಬೆಂಗಳೂರು , ಶನಿವಾರ, 25 ನವೆಂಬರ್ 2017 (12:48 IST)
ಬೆಂಗಳೂರು: ಮಾರುಕಟ್ಟೆಗೆ ಹೋದಾಗ ಬಾಳೆಹಣ್ಣು ಕಣ್ಣಿಗೆ ಬೀಳುತ್ತದೆ. ಒಂದಷ್ಟು ದುಡ್ಡು ತೆತ್ತು ಬಾಳೆಹಣ್ಣು ಮನೆಗೆ ತೆಗೆದುಕೊಂಡು ಬರುತ್ತಿರಿ. ರಾತ್ರಿ ಊಟವಾದ ಹಣ್ಣು ತಿಂದು ಸಿಪ್ಪೆ ಬಿಸಾಡುತ್ತಿರಿ. ಆದರೆ ಈ  ಬಾಳೆಹಣ್ಣಿನ ಸಿಪ್ಪೆಯಿಂದ ಸಾಕಷ್ಟು ಪ್ರಯೋಜನವಿದೆಯಂತೆ ನಿಮಗೆ ಗೊತ್ತಾ…?


ಮೊಡವೆಯ ಸಮಸ್ಯೆ ಪರಿಹಾರ:  ಬಾಳೆಹಣ್ಣಿನ ಸಿಪ್ಪೆಯ ಚಿಕ್ಕ ತುಂಡೊಂದನ್ನು ತೆಗೆದುಕೊಂಡು ನಿಮ್ಮ ಮುಖದಲ್ಲಿ ಮೊಡವೆ ಇರುವ ಜಾಗದ ಮೇಲೆ ಸ್ವಲ್ಪ ಹೊತ್ತು ನಿಧಾನವಾಗಿ ಮಸಾಜ್ ಮಾಡಿ. ಹತ್ತು ನಿಮಿಷ  ಹಾಗೇ ಬಿಡಿ. ಆಮೇಲೆ ಶುದ್ಧವಾದ ನೀರಿನಿಂದ ಮುಖವನ್ನು ತೊಳೆಯಿರಿ. ಒಂದು ವಾರ ಹೀಗೆ ಮಾಡುತ್ತಿದ್ದರೆ ಮುಖದಲ್ಲಿರುವ ಮೊಡವೆ ನಿಧಾನಕ್ಕೆ ಮರೆಯಾಗುತ್ತದೆ.

ಆರೋಗ್ಯಕರವಾದ ಚರ್ಮಕ್ಕೆ: ಒಂದು ತಾಜಾವಾದ ಬಾಳೆಹಣ್ಣಿನ ಸಿಪ್ಪೆ ತೆಗೆದುಕೊಂಡು ಅದನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಮಾಡಿ ಮಿಕ್ಸಿಯಲ್ಲಿ  ರುಬ್ಬಿ. ರುಬ್ಬಿದ ಮಿಶ್ರಣಕ್ಕೆ ಒಂದು ಮೊಟ್ಟೆಯ ಹಳದಿ ಭಾಗವನ್ನು ಸೇರಿಸಿ. ನಂತರ  ಮಿಶ್ರಣವನ್ನು ನಿಮ್ಮ ಮುಖಕ್ಕೆ ಹಚ್ಚಿ. ಐದು ನಿಮಿಷ  ಬಿಟ್ಟು  ನೀರಿನಿಂದ ಮುಖವನ್ನು ತೊಳೆಯಿರಿ. ವಾರದಲ್ಲಿ ಎರಡು ಅಥವಾ ಮೂರುದಿನ ಹೀಗೆ ಮಾಡಿ.ಇದು ನಿಮ್ಮ ಮುಖದ ನೆರಿಗೆಯನ್ನು ಕಡಿಮೆ ಮಾಡುವುದಲ್ಲದೇ, ಕಾಂತಿಯನ್ನು ಹೆಚ್ಚಿಸುತ್ತದೆ.

 
ಕಪ್ಪುಕಲೆ ನಿವಾರಣೆ: ಒಂದು ಬಾಳೆಹಣ್ಣಿನ ಸಿಪ್ಪೆ ತೆಗೆದುಕೊಂಡು ಅದನ್ನು ಚಿಕ್ಕದಾಗಿ ಕತ್ತರಿಸಿಕೊಳ್ಳಿ. ಇದಕ್ಕೆ ಒಂದು ಚಮಚ ಮೊಸರು ಹಾಕಿ ನುಣ್ಣಗೆ ರುಬ್ಬಿ. ರುಬ್ಬಿದ ಮಿಶ್ರಣಕ್ಕೆ ಒಂದು ಚಮಚ ಜೇನುತುಪ್ಪು, ಅರ್ಧಚಮಚ ನಿಂಬೆಹಣ್ಣಿನ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಮುಖಕ್ಕೆ ಹಚ್ಚಿ 10 ನಿಮಿಷ ಹಾಗೆಯೇ ಬಿಡಿ. ನಂತರ ತಣ್ಣಗಿನ ನೀರಿನಿಂದ ಮುಖ ತೊಳೆಯಿರಿ. ವಾರದಲ್ಲಿ ಎರಡು ಬಾರಿ ಹೀಗೆ ಮಾಡಿದರೆ ಕಲೆರಹಿತ ಮುಖ ನಿಮ್ಮದಾಗುತ್ತದೆ.

 
ಬಿಳುಪಾದ ಹಲ್ಲು: ಬಾಳೆಹಣ್ಣಿನ ಸಿಪ್ಪೆಯನ್ನು ಚಿಕ್ಕ ತುಂಡುಗಳನ್ನಾಗಿ ಮಾಡಿಕೊಂಡು ಎರಡರಿಂದ ಮೂರು ನಿಮಿಷದ ತನಕ ಹಲ್ಲುಗಳನ್ನು ತಿಕ್ಕಿ. ಆಮೇಲೆ ಹತ್ತು ನಿಮಿಷ ಹಾಗೆಯೇ ಬಿಡಿ. ನಂತರ ಟೂಥ್ ಬ್ರಷ್ ನಲ್ಲಿ ಸ್ವಲ್ಪ ಟೂಥ್ ಪೇಸ್ಟ್ ತೆಗೆದುಕೊಂಡು ಹಲ್ಲುಗಳನ್ನು ತಿಕ್ಕಿ. ಇದರಿಂದ ನಿಮ್ಮ ಹಲ್ಲುಗಳು ಮುತ್ತಿನಂತೆ ಬಿಳುಪಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹುಡುಗರೇ ಹಣ ಉಳಿಸಬೇಕಾ…? (ವಿಡಿಯೋ ನೋಡಿ)