Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕಿತ್ತಳೆ ಹಣ್ಣಿನ ಫೇಸ್ ಪ್ಯಾಕ್

ಕಿತ್ತಳೆ ಹಣ್ಣಿನ ಫೇಸ್ ಪ್ಯಾಕ್
ಬೆಂಗಳೂರು , ಗುರುವಾರ, 27 ಸೆಪ್ಟಂಬರ್ 2018 (19:15 IST)
ಈಗಿನ ವಿದ್ಯಮಾನದಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು, ಸೌಂದರ್ಯವನನ್ನು ಕಾಪಾಡಿಕೊಳ್ಳುವುದು ಒಂದು ರೀತಿಯ ಸವಾಲೇ ಸರಿ. ಇದಕ್ಕಾಗಿ ನಮ್ಮ ಯುವಜನತೆಯಷ್ಟೇ ಅಲ್ಲದೇ 40 ದಾಟಿದವರೂ ಸಹ ಯೌವ್ವನವನ್ನು ಕಾಪಾಡಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ಅದರಲ್ಲಿಯೂ ಚಳಿಗಾಲದಲ್ಲಿ ಮತ್ತು ಬೇಸಿಗೆಕಾಲದಲ್ಲಿ ತ್ವಚೆಯ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಕಷ್ಟಕರ. ಆದರೆ ಕಿತ್ತಳೆ ಹಣ್ಣು ಸಹ ಚಳಿಗಾಲದ ಸೀಸನ್ ಫುಡ್ ಆಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಬಿಸಾಡದೇ ಅದರಿಂದ ಫೇಸ್ ಮಾಸ್ಕ್ ತಯಾರಿಸಿದರೆ ತ್ವಚೆಯ ಹೊಳಪನ್ನು ಹೆಚ್ಚಿಸಬಹುದು. 
 
- ಕಿತ್ತಳೆ ರಸವನ್ನು ಮುಖಕ್ಕೆ ಹಚ್ಚಿ 5 ನಿಮಿಷದ ಬಳಿಕ ತಣ್ಣನೆಯ ನೀರಿನಿಂದ ಮುಖವನ್ನು ತೊಳೆಯಬೇಕು. ಈ ಫೇಸ್ ಪ್ಯಾಕ್‌ ಮುಖದ ತ್ವಚೆಯನ್ನು ಬಿಗಿಗೊಳಿಸುತ್ತದೆ. ಮತ್ತು ಇದನ್ನು ಪ್ರತಿದಿನ ಸ್ನಾನ ಮಾಡುವ ಮೊದಲು ಮಾಡಿಕೊಂಡರೆ ಮುಖವು ಇಡೀ ದಿನ ತಾಜಾತನದಿಂದ ಕೂಡಿರುತ್ತದೆ.
 
- ಕಿತ್ತಳೆ ರಸವನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ ಹತ್ತಿಯನ್ನು ತೆಗೆದುಕೊಂಡು ಅದರಲ್ಲಿ ಅದ್ದಿ ಮುಖಕ್ಕೆ ಉಜ್ಜಬೇಕು. ಈ ರೀತಿ ಮಾಡುವುದರಿಂದ ಧೂಳಿನಿಂದ ಮುಖ ಹಾಳಾಗುವುದನ್ನು ಅಥವಾ ಮುಖ ಕಲುಷಿತಗೊಳ್ಳುವುದನ್ನು ತಡೆಯಬಹುದು.
 
- ಮೊದಲು ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಬಿಸಿಲಿನಲ್ಲಿ ಒಣಗಿಸಿ ನಂತರ ಅದನ್ನು ಮೊಸರಿನಲ್ಲಿ ಮಿಶ್ರಣ ಮಾಡಿ ಅರ್ಧ ಚಮಚ ನಿಂಬೆ ರಸ ಸೇರಿಸಿ ಮುಖಕ್ಕೆ ಹಚ್ಚಿ ಅರ್ಧ ಗಂಟೆಯ ನಂತರ ಮುಖವನ್ನು ತೊಳೆಯಬೇಕು, ಈ ರೀತಿ ವಾರಕ್ಕೊಮ್ಮೆ ಮಾಡುತ್ತಾ ಬಂದರೆ ಮುಖದಲ್ಲಿ ಕಪ್ಪುಕಲೆ, ಮೊಡವೆ ಈ ರೀತಿಯ ಸಮಸ್ಯೆಗಳು ಕಡಿಮೆಯಾಗುತ್ತವೆ.
 
- ಮುಖದ ಅಂದವನ್ನು ಹೆಚ್ಚಿಸಲು ಕಿತ್ತಳೆ ಹಣ್ಣಿನ ರಸ, ನಿಂಬೆ ರಸ ಮತ್ತು ಮೊಸರನ್ನು ಸಮ ಪ್ರಮಾಣದಲ್ಲಿ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ 10 ನಿಮಿಷದ ಬಳಿಕ ತಣ್ಣೀರಿನಿಂದ ಮುಖ ತೊಳೆದರೆ ಮುಖದ ಅಂದ ಇನ್ನಷ್ಟು ಹೆಚ್ಚಾಗುತ್ತದೆ.
 
- ಕಿತ್ತಳೆ ಸಿಪ್ಪೆಯನ್ನು ಪೇಸ್ಟ್ ಮಾಡಿ ಅದರೊಂದಿಗೆ ಓಟ್ಸ್ ಅನ್ನು ನುಣ್ಣಗೆ ಪುಡಿ ಮಾಡಿ ಅದನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ ಮುಖಕ್ಕೆ ಸ್ಕ್ರಬ್ ಮಾಡುವುದರಿಂದ ಮುಖವನ್ನು ಮೊಡವೆ, ಕಲೆಗಳಿಂದ ಮುಕ್ತಿಗೊಳಿಸಬಹುದು.
 
-ಮೊದಲು ಜೇನಿನೊಂದಿಗೆ ಕಿತ್ತಳೆ ರಸ ಮತ್ತು ನೀರನ್ನು ಮಿಶ್ರಣ ಮಾಡಿಕೊಳ್ಳಬೇಕು. ಶ್ಯಾಂಪೂ ಹಾಕಿದ ಕೂದಲಿಗೆ ಈ ಮಿಶ್ರಣವನ್ನು ಹಚ್ಚಿಕೊಂಡು 10 ರಿಂದ 15 ನಿಮಿಷ ಬಿಟ್ಟು ನೀರಿನಿಂದ ತೊಳೆದುಕೊಂಡರೆ ಕೂದಲಿಗೆ ಇದು ಹೇರ್ ಕಂಡೀಷನರ್ ತರಹ ಕೆಲಸ ಮಾಡುತ್ತದೆ.
 
- ಕಿತ್ತಳೆ ಸಿಪ್ಪೆ ಮತ್ತು ನಿಂಬೆ ರಸವನ್ನು ಪೇಸ್ಟ್ ಮಾಡಿಕೊಂಡು ತಲೆಗೆ ಹಚ್ಚಿಕೊಂಡರೆ ತಲೆಹೊಟ್ಟು ನಿವಾರಣೆಯಾಗುತ್ತದೆ ಆದರೆ ಇದನ್ನು ಶ್ಯಾಂಪೂ ಹಾಕುವ 25 ನಿಮಿಷಕ್ಕಿಂತ ಮೊದಲು ಮಾಡಬೇಕು.
 
- ಕಿತ್ತಳೆ ಸಿಪ್ಪೆಯನ್ನು ಇಡೀ ರಾತ್ರಿ ನೀರಿನಲ್ಲಿ ನೆನೆಸಿಟ್ಟು ಮರುದಿನ ಕೂದಲು ಮತ್ತು ನೆತ್ತಿಗೆ ಹಚ್ಚಿಕೊಲ್ಳುವುದರಿಂದ ಕೂದಲು ಸ್ವಚ್ಛವಾಗುತ್ತದೆ. ಇದನ್ನು 30 ನಿಮಿಷಗಳ ನಂತರ ತೊಳೆದುಕೊಳ್ಳಬೇಕು. 
 
ಮಾನವನ ಚರ್ಮವು ಅತ್ಯಂತ ಸೂಕ್ಷ್ಮವಾದದ್ದಾಗಿದೆ. ಅದನ್ನು ಕಾಪಾಡಿಕೊಳ್ಳುವುದೂ ಸವಾಲೇ ಸರಿ. ಆದ್ದರಿಂದ ನಾವು ನಮ್ಮ ಚರ್ಮಕ್ಕೆ ಏನನ್ನಾದರೂ ಪ್ರಯೋಗಗಳನನ್ನು ಮಾಡುವ ಮಾದಲು ವೈದ್ಯರ ಸಲಹೆಗಳನ್ನು ಪಡೆದುಕೊಳ್ಳುವುದು ಉತ್ತಮ. ಕೂದಲಿನ ಸಮಸ್ಯೆ ಇರಬಹುದು ಅಥವಾ ಚರ್ಮದ ಸಮಸ್ಯೆಯೇ ಇರಬಹುದು. ಅದನ್ನು ಚರ್ಮರೋಗತಜ್ಞರ ಸಲಹೆಯನ್ನು ತೆಗೆದುಕೊಂಡು ಮುಂದುವರಿಯುವುದು ಉತ್ತಮ. 

Share this Story:

Follow Webdunia kannada

ಮುಂದಿನ ಸುದ್ದಿ

ಸುಲಭವಾಗಿ ಮನೆಯಲ್ಲೇ ಚಾಕೊಲೇಟ್ ಮಾಡಬಹುದು ಗೊತ್ತಾ?