Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

Actor Govinda: ಬಾಲಿವುಡ್ ನಟ ಗೋವಿಂದಗೆ ಗುಂಡೇಟು: ಆಸ್ಪತ್ರೆಗೆ ದಾಖಲು

Govinda

Krishnaveni K

ಮುಂಬೈ , ಮಂಗಳವಾರ, 1 ಅಕ್ಟೋಬರ್ 2024 (10:31 IST)
ಮುಂಬೈ: ಬಾಲಿವುಡ್ ನಟ ಗೋವಿಂದಗೆ ಅಕಸ್ಮತ್ತಾಗಿ ಗುಂಡೇಟಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರಿಗೆ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ ಘಟನೆ ನಡೆದಿದೆ. ತಮ್ಮದೇ ರಿವಾಲ್ವರ್ ನಿಂದ ತಪ್ಪಾಗಿ ಗುಂಡು ಹಾರಿದ್ದು, ಗೋವಿಂದ ಕಾಲಿಗೆ ಏಟಾಗಿದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ ಕೋಲ್ಕತ್ತಾಗೆ ಹೊರಡಲು ರೆಡಿಯಾಗುತ್ತಿದ್ದಾಗ ಗೋವಿಂದ ಮನೆಯಲ್ಲಿಯೇ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಂಡು ಹೊರತೆಗೆಯಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದೆ ಎಂದು ಅವರ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ. ಗೋವಿಂದ ಅವರು ಏರ್ ಪೋರ್ಟ್ ಗೆ ಹೊರಡುವ ವೇಳೆ ಈ ಘಟನೆ ನಡೆದಿದೆ ಎಂದು ಅವರ ಮ್ಯಾನೇಜರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬೆಳಗಿನ 4.45 ರ ಸುಮಾರಿಗೆ ಈ ಘಟನೆ ನಡೆದಿದೆ. ಸದ್ಯಕ್ಕೆ ಗೋವಿಂದ ಮುಂಬೈನ ಸಿಟಿ ಕೇರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಗನ್ ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಜನೀಕಾಂತ್ ಗೆ ಅನಾರೋಗ್ಯ: ಲೇಟಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ