ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸಿನಿಮಾ ತಾರೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಬಾಲಿವುಡ್ ನಟಿ ಮಲ್ಲಿಕಾ ಶೆರಾವತ್ ಅವರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
'ದಾಸ್ ದೇವ್' ಚಿತ್ರದ ವಿಶೇಷ ಪ್ರದರ್ಶನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾ ಶೆರಾವತ್ ಅವರು,’ ಮಹಾತ್ಮ ಗಾಂಧಿಯ ಪುಣ್ಯ ಭೂಮಿ ಇಂದು ಅತ್ಯಾಚಾರಿಗಳ ದೇಶವಾಗುತ್ತಿದೆ. ಮಹಿಳೆ ಹಾಗೂ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ನಿಜಕ್ಕೂ ನಾಚಿಕೆಗೇಡು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ ಮಾಧ್ಯಮಗಳು ನಮ್ಮ ದೇಶದಲ್ಲಿ ಹೆಚ್ಚು ಶಕ್ತಿಯುತವಾಗಿದೆ. ಹೀಗಾಗಿ, ಇಂತಹ ಪ್ರಕರಣಗಳ ಬೆಳಕಿಗೆ ಬರುತ್ತಿದೆ. ಮಾಧ್ಯಮಗಳ ಮೇಲೆ ನಂಬಿಕೆ ಕೂಡ ಹೆಚ್ಚಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ