ರಾಜಸ್ಥಾನದ ಜೋಧಪುರದಲ್ಲಿ ಥಗ್ಸ್ ಆಫ್ ಹಿಂದೂಸ್ತಾನ್ ಸಿನಿಮಾ ಚಿತ್ರೀಕರಣದ ವೇಳೆ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು, ತಕ್ಷಣ ಮುಂಬೈನಿಂದ ವಿಶೇಷ ವಿಮಾನದಲ್ಲಿ ವೈದ್ಯರ ತಂಡ ಬಂದು ಅಮಿತಾ ಬಚ್ಚನ್ ಅವರ ಆರೋಗ್ಯ ಪರಿಶೀಲಿಸಿ ಚಿಕಿತ್ಸೆ ನೀಡಿ ದ್ರವ ಆಹಾರ ಸೇವಿಸಿ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರ ಪತ್ನಿ ಜಯಾ ಬಚ್ಚನ್ ಅವರು,’ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸೊಂಟ ಮತ್ತು ಭುಜ ನೋವು ಮಾತ್ರ ಇದೆ ಅಷ್ಟೆ, ಥಗ್ಸ್ ಆಫ್ ಹಿಂದೂಸ್ಥಾನ್ ಸಿನಿಮಾದಲ್ಲಿ ಹಾಕುತ್ತಿರುವ ಕಾಸ್ಟ್ಯೂಮ್ ತುಂಬಾ ಭಾರವಿರುವುದರಿಂದ ಹೀಗೆ ಆಗಿದೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ