ಹೈದರಾಬಾದ್: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಶೂಟಿಂಗ್ ನಡುವೆ ಅಸ್ವಸ್ಥರಾಗಿದ್ದು ತಕ್ಷಣವೇ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿರುವ ಪ್ರಾಜೆಕ್ಟ್ ಕೆ ಸಿನಿಮಾದ ಶೂಟಿಂಗ್ ಗಾಗಿ ಹೈದರಾಬಾದ್ ನಲ್ಲಿದ್ದ ದೀಪಿಕಾಗೆ ಅನಾರೋಗ್ಯ ಕಾಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಹೃದಯ ಬಡಿತದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಬಳಲಿಕೆಯಿಂದ ಈ ರೀತಿ ಆಗಿದೆ ಎನ್ನಲಾಗಿದೆ. ಇದೀಗ ಸುಧಾರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.