ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ವಾಸವಿದ್ದ ಮುಂಬೈನ ವರ್ಲಿಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, 33ನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಆಪಾರ್ಟ್ ಮೆಂಟ್ ನಲ್ಲಿ 90ಕ್ಕೂ ಹೆಚ್ಚು ನಿವಾಸಿಗಳು ವಾಸಿಸುತ್ತಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ಅಗ್ನಿ ಶ್ಯಾಮಕ ದಳ ಸಿಬ್ಬಂದಿಗಳು ಆಗಮಿಸಿದ್ದು, ಒಟ್ಟು 6 ಅಗ್ನಿಶ್ಯಾಮಕ ವಾಹನಗಳು ಕಾರ್ಯಾಚರಣೆ ನಡೆಸಿದ್ದಾರೆ. ಆದರೂ ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಟ್ಟಿರುವುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ