ಮುಂಬೈ: ಬಾಲಿವುಡ್ ನಟ ಹೃತಿಕ್ ರೋಷನ್ ಗೆಳತಿ ಸಬಾ ಆಜಾದ್ ಜೊತೆ ಮದುವೆಯಾಗಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ಸಮಯದಿಂದ ಇಬ್ಬರೂ ಜೊತೆಯಾಗಿ ಓಡಾಡುತ್ತಿದ್ದಾರೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಸಬಾ, ಹೃತಿಕ್ ನಿವಾಸಕ್ಕೆ ಭೇಟಿ ನೀಡಿದ್ದರು.
ಹೀಗಾಗಿ ಇಬ್ಬರೂ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ಮತ್ತಷ್ಟು ರೆಕ್ಕೆ ಪುಕ್ಕ ಹುಟ್ಟಿಕೊಂಡಿದೆ. ವಿಶೇಷವೆಂದರೆ ಸಬಾ ಹೃತಿಕ್ ಮೊದಲ ಪತ್ನಿ ಸುಸೇನ್ ಖಾನ್ ಸ್ನೇಹಿತೆ. ಹೃತಿಕ್ ಗೆ ಮೊದಲ ಮದುವೆಯಿಂದ ಇಬ್ಬರು ಮಕ್ಕಳಿದ್ದಾರೆ. ಇದೀಗ ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ.