ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಸಂಬಂಧಿಸಿದ ಡ್ರಗ್ ಸೇವನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಅಕ್ಟೋಬರ್ 3ರಂದು ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ ವೇಳೆ ಆರ್ಯನ್ ಖಾನ್, ಎನ್ಸಿಬಿಗೆ ಸಿಕ್ಕಿಬಿದ್ದಿದ್ದರು.ವಾರಗಳ ಕಾಲ ಕಸ್ಟಡಿಯಲ್ಲಿದ್ದು ವಿಚಾರಣೆ ಎದುರಿಸಿದ ಬಳಿಕ ಆರ್ಥರ್ ರೋಡ್ ಜೈಲ್ ಸೇರಿದ್ದ ಆರ್ಯನ್ಗೆ 25 ದಿನಗಳ ಬಳಿಕ ಹೈಕೋರ್ಟ್ ಜಾಮೀನು ನೀಡಿತ್ತು. ಎನ್ಸಿಬಿ ಅಧಿಕಾರಿಗಳ ವಿರುದ್ಧವೇ ವಸೂಲಿ ಆರೋಪ ಕೇಳಿ ಬಂದಿತ್ತು. ಪ್ರಕರಣದಲ್ಲಿ ಪ್ರಭಾವಿಗಳ ಮಕ್ಕಳು ಪಾಲ್ಗೊಂಡಿದ್ದರಿಂದ ತನಿಖೆ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ. ಪ್ರಭಾವಿಗಳ ಹಸ್ತಕ್ಷೇಪ ಹೆಚ್ಚಿದೆ. ಆದ್ದರಿಂದ ಸಿಬಿಐ ತನಿಖೆಗೆ ಒಪ್ಪಿಸುವುದು ಸೂಕ್ತ ಎಂದು ವಕೀಲ ಎಂ.ಎಲ್.ಶರ್ಮಾ ಕೋರ್ಟ್ಗೆ ಮನವಿ ಮಾಡಿದ್ದಾರೆ.