ಮುಂಬೈ: ಬಾಲಿವುಡ್ ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಜಗ್ಗಾ ಜಾಸೂಸ್ ಚಿತ್ರದ ನಟಿ ಹಾಗೂ ಅಸ್ಸಾಂ ಭಾಷೆಯ ಗಾಯಕಿ ಬಿದಿಶಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಗಾಂವ್ ನಲ್ಲಿರುವ ತಮ್ಮ ಮನೆಯಲ್ಲಿ ಬಿದಿಶಾ ಈ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ. ಬಿದಿಶಾ ಫೋನ್ ಕರೆಗೆ ಸ್ಪಂದಿಸದಿದ್ದಾಗ ಗಾಬರಿಗೊಂಡ ತಂದೆ ಸ್ಥಳೀಯ ಪೊಲೀಸರಿಗೆ ನೆರವು ಕೇಳಿದ್ದರು. ಅದರಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಬಾಗಿಲು ಮುಚ್ಚಿದ ಸ್ಥಿತಿಯಲ್ಲಿತ್ತು. ಹಾಗೂ ಮನೆಯ ಒಳಗಿನ ಕೊಠಡಿಯಲ್ಲಿ ಬಿದಿಶಾ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿದಿಶಾ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮದುವೆಯ ನಂತರ ಇವರಿಬ್ಬರ ಸಂಬಂಧ ಚೆನ್ನಾಗಿರಲಿಲ್ಲ. ಆಗಾಗ ಕಿತ್ತಾಡುತ್ತಿದ್ದರು ಎಂದು ಬಿದಿಶಾ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ