ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಜೈಪುರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಮಾ.10ರೊಳಗೆ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ಆಕ್ಷೇಪಾರ್ಹವಾಗಿದ್ದು ವಕೀಲರ ವೃತ್ತಿಯನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ’ಜಾಲಿ ಎಲ್‌ಎಲ್‌ಬಿ 2’ ಚಿತ್ರದ ವಿರುದ್ಧ ಅರ್ಜಿದಾರರು ನ್ಯಾಾಯಾಲಯಕ್ಕೆ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಸುಭಾಷ್ ಕಪೂರ್ ನಿರ್ದೇಶನದ ಈ ಚಿತ್ರ 2013ರಲ್ಲಿ ಬಿಡುಗಡೆಯಾಗಿದ್ದ ಜಾಲಿ ಎಲ್‌ಎಲ್‌ಬಿ ಚಿತ್ರದ ಮುಂದುವರಿದ ಭಾಗವಾಗಿದೆ. ಅಕ್ಷಯ್ ಕುಮಾರ್ ಜತೆಗೆ ಹುಮಾ ಖುರೇಷಿ, ಸೌರಭ್ ಶುಕ್ಲಾ ಮತ್ತು ಅನ್ನು ಕಪೂರ್ ಚಿತ್ರದ ಪಾತ್ರವರ್ಗದಲ್ಲಿದ್ದಾರೆ.
ಈ ಹಿಂದೆಯೂ ಇದೇ ರೀತಿ ಆಕ್ಷೇಪ ವ್ಯಕ್ತಪಡಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ತ್ರಿಸದಸ್ಯ ಸಮಿತಿ ಚಿತ್ರವನ್ನು ವೀಕ್ಷಿಸಿ ಚಿತ್ರ ಬಿಡುಗಡೆಗೆ ಅವಕಾಶ ಕಲ್ಪಿಸಬೇಕೆಂದು ಅರ್ಜಿದಾರರಾದ ಅಜಯ್ ಕುಮಾರ್ ವಾಗ್‌ಮಾರೆ ನ್ಯಾಯಾಲಯದ ಮೊರೆಹೋಗಿದ್ದರು. ಚಿತ್ರದ ಶೀರ್ಷಿಕೆಯಲ್ಲಿನ ಎಲ್‌ಎಲ್‌ಬಿ ಪದವನ್ನು ಕೈಬಿಡುವಂತೆ ಅರ್ಜಿದಾರರು ಕೋರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.