ಹೈದರಾಬಾದ್ : ಟಾಲಿವುಡ್ ನ ನಟ, ರಾಜಕಾರಣಿ ಪವರ್ ಸ್ಟಾರ್ ಪವನ್ ಕಲ್ಯಾಣ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂಬ ಭಯಾನಕ ವಿಚಾರವನ್ನು ಸ್ವತಃ ಪವನ್ ಅವರೇ ಬಹಿರಂಗಪಡಿಸಿದ್ದಾರೆ.
ಗುರುವಾರ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಎಲುರು ಹಳೆಯ ಬಸ್ ನಿಲ್ದಾಣದ ಬಳಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ನನ್ನನ್ನು ಹತ್ಯೆ ಮಾಡಲು ಮೂರು ಜನ ನಡೆಸಿದ ಸಂಭಾಷಣೆಯ ಆಡಿಯೋ ತುಣುಕು ನಂಗೆ ಸಿಕ್ಕಿತ್ತು. ಆ ಮೂರು ಜನ ಯಾರೂ ( ಯಾವ ಪಾರ್ಟಿ ) ಅಂತಾ ಗೊತ್ತಿಲ್ಲ. ಆದರೆ, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸದಂತೆ ನೋಡಿಕೊಳ್ಳುವುದು ಅವರ ಉದ್ದೇಶವಾದಂತೆ ಕಾಣುತ್ತದೆ ಎಂದು ಪವನ್ ಹೇಳಿಕೊಂಡಿದ್ದಾರೆ.
ಹಾಗೇ ಇಂತಹ ಗೊಡ್ಡು ಬೆದರಿಕೆಗಳಿಗೆ ಅಂಜುವುದಿಲ್ಲ. ನಾನು ಜನರ ಸೇವೆಗೆ ಜೀವನವನ್ನು ಮುಡಿಪಾಗಿಡುತ್ತೇನೆ. ಜನರಿಗಾಗಿಯೇ ರಾಜಕೀಯಕ್ಕೆ ಧುಮುಕಿದ್ದೇನೆ ಎಂದು ಪವರ್ ಸ್ಟಾರ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.