ಮುಂಬೈ: ಮಲಯಾಳಂ ಸ್ಟಾರ್ ನಟ ಪೃಥ್ವಿ ರಾಜ್ ಸುಕುಮಾರನ್ ಹಿಂದಿಯಲ್ಲಿ ಬಡೇ ಮಿಯಾ ಛೋಟೇ ಮಿಯಾ ಸಿನಿಮಾದಲ್ಲಿ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ.
ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿರಾಜ್ ಖಳನಾಯಕನ ಪಾತ್ರ ಮಾಡುತ್ತಿದ್ದಾರೆ. ಈ ಬಗ್ಗೆ ಅವರು ಮನಬಿಚ್ಚಿ ಮಾತನಾಡಿದ್ದಾರೆ.
ಏಳು ವರ್ಷಗಳ ಬಳಿಕ ಪೃಥ್ವಿರಾಜ್ ಹಿಂದಿಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಟಿಸಿದ ಅನುಭವ ಮತ್ತು ಸಿನಿಮಾ ಒಪ್ಪಿಕೊಂಡ ಹಿನ್ನಲೆಯನ್ನು ಪೃಥ್ವಿರಾಜ್ ಹೇಳಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅಭಿನಯಿಸಲು ಪ್ರಮುಖ ಕಾರಣ ನಿರ್ದೇಶಕ ಪ್ರಶಾಂತ್ ನೀಲ್ ಎಂದು ಹೇಳಿಕೊಂಡಿದ್ದಾರೆ.
ಪ್ರಶಾಂತ್ ನೀಲ್ ಸಲಾರ್ ಸಿನಿಮಾದಲ್ಲಿ ಪೃಥ್ವಿರಾಜ್ ಅಭಿನಯಿಸಿದ್ದರು. ಈ ಸಿನಿಮಾದಲ್ಲಿ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ಇದೇ ಕಾರಣಕ್ಕೆ ಚೋಟೇ ಮಿಯಾ ಸಿನಿಮಾದಲ್ಲಿ ನಟಿಸಲು ಪ್ರಶಾಂತ್ ನೀಲ್ ಒತ್ತಾಯಿಸಿದ್ದರು. ಅದೇ ಕಾರಣಕ್ಕೆ ಸಿನಿಮಾ ಒಪ್ಪಿಕೊಂಡೆ ಎಂದು ಪೃಥ್ವಿರಾಜ್ ಹೇಳಿಕೊಂಡಿದ್ದಾರೆ.