ಮುಂಬೈ: ಕಳೆದ ಕೆಲವು ದಿನಗಳಿಂದ ಅಮೆರಿಕಾದ ಗಾಯಕ ನಿಕ್ ಜೋನ್ಸ್ ಜೊತೆ ಕಾಣಿಸಿಕೊಳ್ಳುತ್ತಿರುವ ಪ್ರಿಯಾಂಕ ಎಲ್ಲಿಯೂ ತಮ್ಮ ಸಂಬಂಧದ ಬಗ್ಗೆ ಹೇಳಿಕೊಂಡಿಲ್ಲ. ಅದರೆ ಈಗ ಅವರಿಬ್ಬರ ಸುದ್ದಿಗಳು ಮಾತ್ರ ಗಾಸಿಪ್ ಪ್ರಿಯರ ಬಾಯಲ್ಲಿ ಓಡಾಡುತ್ತಿವೆ.
ಈಗ ಪ್ರಿಯಾಂಕ ಕೈಯಲ್ಲಿರುವ ಉಂಗುರವನ್ನು ಮಾಧ್ಯಮಗಳ ಕಣ್ಣಿನಿಂದ ಮರೆಮಾಚುವುದಕ್ಕೆ ಹೋಗಿ ಮತ್ತೆ ಸುದ್ದಿಯಲ್ಲಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಗೆ ಬಂದಿಳಿದ ಪ್ರಿಯಾಂಕ ವಿಮಾನ ನಿಲ್ದಾಣದ ಹೊರಗಡೆ ಮಾಧ್ಯಮಗಳನ್ನು ಕಂಡ ಕೂಡಲೇ ಬೆರಳಲ್ಲಿರುವ ಉಂಗುರವನ್ನು ಮರೆ ಮಾಡಿ ಜೇಬಿನಲ್ಲಿ ಇರಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಅಭಿಮಾನಿಯೊಬ್ಬರ ಮೊಬೈಲ್ ನಲ್ಲಿ ಎಲ್ಲ ದೃಶ್ಯಗಳು ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ