ಮುಂಬೈ : ಬಾಲಿವುಡ್ ನ ಸ್ಟಾರ್ ನಟ ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ನಟಿಸಿದ ಭರತ್ ಚಿತ್ರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆಯಂತೆ.
ಅಲಿ ಅಬ್ಬಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಭರತ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಬೇಕಾಗಿದ್ದ ಪ್ರಿಯಾಂಕ ಚೋಪ್ರಾ ಕೈಕೊಟ್ಟ ಹಿನ್ನಲೆಯಲ್ಲಿ ಈ ಹಿಂದೆ ಬಾರೀ ಸುದ್ದಿಯಾಗಿತ್ತು. ನಂತರ ಕತ್ರಿನಾ ಕೈಫ್ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದರು.
ಆದರೆ ಇದೀಗ 200 ಕೋಟಿ ವೆಚ್ಚದಲ್ಲಿ ರೆಡಿಯಾಗುತ್ತಿರುವ ಈ ಚಿತ್ರಕ್ಕೆ ಆರ್ಥಿಕ ತೊಂದರೆ ಎದುರಾಗಿದೆಯಂತೆ. ಭಾರತ್ ಚಿತ್ರದ ಸಹ ಕಲಾವಿದರಿಗೆ ನೀಡಿದ ಚೆಕ್ ಬೌನ್ಸ್ ಆಗಿದೆ ಎಂಬ ಆರೋಪ ಇದೀಗ ಕೇಳಿ ಬಂದಿದೆ. ಈ ಕಾರಣಕ್ಕೆ ಸಹ ಕಲಾವಿದರು ಶೂಟಿಂಗ್ ಮಾಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.