ಬೆಂಗಳೂರು: ಎಂ.ಜಿ ರಸ್ತೆಯ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತ 35 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು 35 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದಾರೆ.
ಈ ಪೈಕಿ ಸಿದ್ಧಾಂತ್ ಸೇರಿದಂತೆ ಆರು ಮಂದಿಯ ಸ್ಯಾಂಪಲ್ ಪಾಸಿಟಿವ್ ಬಂದಿದೆ. ಡ್ರಗ್ಸ್ ಎಲ್ಲಿಂದ ಪೂರೈಕೆಯಾಗಿತ್ತು ಎಂಬ ಬಗ್ಗೆ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.