ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಪತ್ನಿ ಕಿರಣ್ ರಾವ್ ಅವರ ಮುಂಬೈಯ ಬಾಂದ್ರಾದಲ್ಲಿರುವ ಮನೆಗೆ ನುಗ್ಗಿದ ಕಳ್ಳರು ಸುಮಾರು 80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
ಒಂದು ವಾರದ ಹಿಂದೆ ನಡೆದ ಪ್ರಕರಣ ಈಗ ಬೆಳಕಿಗೆ ಬಂದಿದೆ. ಕಿರಣ್ ರಾವ್ ತಂದೆ ಖಾರ್ ಪೊಲೀಸರಿಗೆ ನೀಡಿದ ದೂರಿನನ್ವಯ ತನಿಖೆ ನಡೆಸಲಾಗುತ್ತಿದೆ. ಒಂದು ಡೈಮಂಡ್ ಉಂಗುರ ಮತ್ತು ನೆಕ್ಲೇಸ್ ಕಳವಾಗಿದೆ ಎಂದು ಅವರು ದೂರು ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ಮನೆಗೆ ತೆರಳಿದ ಪೊಲೀಸರು ಮನೆಯ ಕೆಲಸಗಾರರನ್ನು ತನಿಖೆ ನಡೆಸಿದ್ದಾರೆ. ಆದರೆ ಯಾರೂ ಸಂಶಯಾಸ್ಪದವಾಗಿ ಕಂಡು ಬರಲಿಲ್ಲ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ