ಜೈಪುರ
: ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತ್ ಚಿತ್ರ ತೀವ್ರ ವಿರೋಧದ ನಂತರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ಇದೀಗ ಕಂಗನಾ ಅಭಿನಯದ ‘ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ’ ಸಿನಿಮಾಗೆ ವಿರೋಧ ವ್ಯಕ್ತವಾಗಿದೆ.
ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜೀವನ ಆಧಾರಿತ ಚಿತ್ರವಾಗಿದ್ದ ‘ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ’ ಚಿತ್ರದಲ್ಲಿ ಇತಿಹಾಸ ತಿರುಚಲಾಗ್ತಿದೆ ಎಂದು ಆರೋಪಿಸಿ ರಾಜಸ್ಥಾನದ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಪಂಡಿತ್ ಸುರೇಶ್ ಮಿಶ್ರಾ ಸುದ್ದಿಗೋಷ್ಠಿ ನಡೆಸಿ ಈ ಚಿತ್ರದ ಚಿತ್ರೀಕರಣ ಶೀಘ್ರವೇ ನಿಲ್ಲಿಸಬೇಕು ಎಂದು ರಾಜಸ್ಥಾನ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
‘ಚಿತ್ರದಲ್ಲಿ ಇತಿಹಾಸ ತಿರುಚಲಾಗುತ್ತಿದೆ. ಚಿತ್ರತಂಡ ಈ ಚಿತ್ರದಲ್ಲಿ ಇತಿಹಾಸ ತಿರುಚಿಲ್ಲ ಎಂದು ಹೇಳಿದ ಮೇಲೆ ಈ ಚಿತ್ರದ ಚಿತ್ರೀಕರಣಕ್ಕೆ ಅನುಮತಿ ನೀಡಬೇಕು. ಸರ್ಕಾರ ಮೂರು ದಿನಗಳ ಒಳಗಡೆ ನಮ್ಮ ಮನವಿ ಒಪ್ಪಿಕೊಳ್ಳಲಿಲ್ಲ ಎಂದರೆ ಪ್ರತಿಭಟನೆ ಮಾಡುತ್ತೇವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ಹಾಗೂ ಗೃಹ ಮಂತ್ರಿ ಗೂಲಾಬ್ ಚಂದ್ ಕಟಾರಿಯಾ ಭೇಟಿ ಮಾಡಿ ಅವರು ಮಧ್ಯಸ್ಥಿಕೆ ವಹಿಸಿಕೊಳ್ಳಲು ಕೇಳಿಕೊಳ್ಳುತ್ತೇನೆ’ ಎಂದು ಸುರೇಶ್ ಮಿಶ್ರಾ ರಾಜಸ್ಥಾನ ಸರ್ಕಾರದಲ್ಲಿ ಕೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ