ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ್ದು, ಇದರ ಪ್ರಕಾರ ದೇಶದದಲ್ಲಿ ಸ್ವಸ್ಥ ಭಾರತ ಸಮೃದ್ಧ ಭಾರತ - ಆಯುಷ್ಮಾನ್ ಭಾರತ್ ಕಾರ್ಯಕ್ರಮ ನ್ಯೂ ಇಂಡಿಯಾ ದೇಶಾದ್ಯಂತ ಒಂದುವರೆ ಲಕ್ಷ ಆರೋಗ್ಯ ಕೇಂದ್ರ ಸ್ಥಾಪನೆ. ಅರ್ಹರಿಗೆ ಉಚಿತ ಚಿಕಿತ್ಸೆ ಮತ್ತು ಔಷಧಿಯನ್ನು ನೀಡಲಾಗುವುದು.
ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ - 10 ಕೋಟಿ ಕುಟುಂಬದ ಬಡ ಮತ್ತು ಅಶಕ್ತ 50 ಕೋಟಿ ಮಂದಿಗೆ ಲಾಭ. ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ 1 ಕುಟುಂಬಕ್ಕೆ 5 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ . ಇದು ವಿಶ್ವದ ಅತೀ ದೊಡ್ಡ ಸರ್ಕಾರಿ ಫಂಡಿಂಗ್ ಆರೋಗ್ಯ ವಿಮಾ ಯೋಜನೆಯಾಗಿದೆ.
ಟಿಬಿ ರೋಗಿಗಳ ಚಿಕಿತ್ಸೆಗಾಗಿ, ಪೌಷ್ಟಿಕಾಂಶಕ್ಕಾಗಿ 600ಕೋಟಿ ರೂಪಾಯಿ ಮೀಸಲು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ