Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಜೆಟ್ ಭಾಷಣದಲ್ಲಿ ಅರುಣ್ ಜೇಟ್ಲಿ ಹೇಳಿದ ಪ್ರಮುಖ ಅಂಶಗಳು ಇಲ್ಲಿವೆ ನೋಡಿ

ಬಜೆಟ್ ಭಾಷಣದಲ್ಲಿ ಅರುಣ್ ಜೇಟ್ಲಿ ಹೇಳಿದ ಪ್ರಮುಖ ಅಂಶಗಳು ಇಲ್ಲಿವೆ ನೋಡಿ
ನವದೆಹಲಿ , ಗುರುವಾರ, 1 ಫೆಬ್ರವರಿ 2018 (11:09 IST)
ನವದೆಹಲಿ: 2018-2019ನೇ ಸಾಲಿನ ಬಜೆಟ್ ಮಂಡನೆ  ಹಿನ್ನೆಲೆ ಅರುಣ್ ಜೇಟ್ಲಿ ತಮ್ಮ ಭಾಷಣವನ್ನು ಆರಂಭಿಸಿದ್ದಾರೆ. ಇದು 5ನೇ ಬಾರಿ ಅರುಣ್ ಜೇಟ್ಲಿ ಅವರು ತಮ್ಮ ಬಜೆಟ್ ಮಂಡಿಸುತ್ತಿರುವುದು. ಈ ಭಾರಿಯ ಭಾಷಣದಲ್ಲಿನ ಪ್ರಮುಖ ಅಂಶಗಳು ಹೀಗಿವೆ. ಕಳೆದ 4 ವರ್ಷಗಳಿಂದ ಸ್ವಚ್ಛ ಆಡಳಿತ ನೀಡುತ್ತಿದ್ದೇವೆ. ಬಡತನ ನಿರ್ಮೂಲನೆಗೆ ಗಮನ ಹರಿಸಿದ್ದೇವೆ. ಆರ್ಥಿಕ ಸುಧಾರಣೆ ಪ್ರಕ್ರಿಯೆಯನ್ನು ಸಮರ್ಥವಾಗಿ ನಿರ್ವಹಿಸಿದ್ದೇವೆ ಎಂದು ಜೇಟ್ಲಿ ಹೇಳಿದ್ದಾರೆ.


ದೇಶದ ಜನರಿಗೆ ನೀಡಿದ  ಭರವಸೆಯಂತೆ ನಡೆದುಕೊಂಡಿದ್ದೇವೆ. ಪ್ರಪಂಚದಲ್ಲೇ 5ನೇ ಅತೀದೊಡ್ಡ ಆರ್ಥಿಕ ದೇಶವಾಗುವತ್ತ ಹೆಜ್ಜೆ ಹಾಕುತ್ತಿದ್ದೇವೆ. ಆರ್ಥಿಕ ಸುಧಾರಣಾ ಪ್ರಕ್ರಿಯೆ ಜಾರಿ ಮಾಡಿದ್ದೇವೆ. ಉತ್ಪಾದನಾ ವಲಯ ಪ್ರಗತಿಯಲ್ಲಿದೆ. ಭಾರತ ಉತ್ಪಾದನೆಯಲ್ಲಿ ಶೀಘ್ರವಾಗಿ  5ನೇ ಸ್ಥಾನಕ್ಕೇರಲಿದೆ.  2ನೇ ದೈವಾರ್ಷಿಕದಲ್ಲಿ ಭಾರತದ ಜಿಡಿಪಿ ಶೇ.7.5ರ ನಿರೀಕ್ಷೆಯಲ್ಲಿದ್ದೇವೆ.  ಈ ಬಜೆಟ್ ನಲ್ಲಿ ಕೃಷಿ, ಶಿಕ್ಷಣ, ಉದ್ಯೋಗಕಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕಳೆದ 2 ವರ್ಷಗಳಲ್ಲಿ ದೇಶದ ಆರ್ಥಿಕತೆಯಲ್ಲಿ ಸುಧಾರಣೆ ಕಂಡಿದೆ ಎಂದು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಬಜೆಟ್ ಗೆ ಸಚಿವ ಸಂಪುಟ ಒಪ್ಪಿಗೆ