ಮುಂಬೈ: ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿದ್ದ ಪುರುಷ ರೋಗಿಯ ಮೇಲೆ ಲೈಂಗಿಕ ಅತ್ಯಾಚಾರವೆಸಗಿದ ಆರೋಪದ ಮೇಲೆ ವೈದ್ಯರೊಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮುಂಬೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, 44 ವರ್ಷದ ರೋಗಿ ಕಿರುಕುಳಕ್ಕೊಳಗಾದಾತ. ತನ್ನೊಂದಿಗೆ ವೈದ್ಯರು ಅನುಚಿತವಾಗಿ ಸ್ಪರ್ಶಿಸಿ, ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದರು.
ಆದರೆ ವೈದ್ಯ ಕೊರೋನಾ ರೋಗಿಯೊಂದಿಗೆ ಸಂಪರ್ಕ ಹೊಂದಿದ ಕಾರಣಕ್ಕೆ ಪೊಲೀಸ್ ಠಾಣೆಗೆ ಕರೆದೊಯ್ಯದೇ ಕ್ವಾರಂಟೈನ್ ನಲ್ಲಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.