Publish Date: Mon, 03 Aug 2020 (10:23 IST)
Updated Date: Mon, 03 Aug 2020 (10:26 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರಿ ಉಮಾದೇವಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಇಬ್ಬರೂ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾವು ಕೊರೋನಾ ಸೋಂಕಿಗೊಳಗಾಗಿರುವ ವಿಚಾರವನ್ನು ಮುಖ್ಯಮಂತ್ರಿಗಳು ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದರು. ಇದಾದ ಬಳಿಕ ಅವರ ಪುತ್ರಿಯೂ ಪರೀಕ್ಷೆಗೊಳಗಾಗಿದ್ದು ಅವರಿಗೂ ಸೋಂಕು ದೃಢಪಟ್ಟಿದೆ ಎಂದು ಇನ್ನೊಬ್ಬ ಪುತ್ರಿ ಅರುಣಾದೇವಿ ಹೇಳಿದ್ದಾರೆ.
ಇಬ್ಬರಿಗೂ ಸದ್ಯಕ್ಕೆ ಯಾವುದೇ ಲಕ್ಷಣಗಳಿಲ್ಲದೇ ಕೊರೋನಾ ತಗುಲಿದೆ. ಹಾಗಿದ್ದರೂ ಮುನ್ನೆಚ್ಚರಿಕೆಯ ಕ್ರಮವಾಗಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.