ನವದೆಹಲಿ: ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚಳವಾದಂತೆ ಅದಕ್ಕೆ ತಕ್ಕ ವ್ಯವಸ್ಥೆಯಿಲ್ಲದೇ ಪರದಾಡುತ್ತಿರುವ ದೆಹಲಿ ಸರ್ಕಾರ ಈಗ ಹಲವು ರೋಗಿಗಳಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಿತ್ತು.
ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆಯಿದ್ದು, ಇದಕ್ಕಾಗಿ ಮನೆಯಲ್ಲೇ ಚಿಕಿತ್ಸೆ ನೀಡಲಾಗಿತ್ತು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಕಾರ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಹೆಚ್ಚಿನ ರೋಗಿಗಳು ಗುಣಮುಖರಾಗುತ್ತಿದ್ದಾರಂತೆ.
ಮನೆಯಲ್ಲೇ ಕೊರೋನಾ ರೋಗಿಗಳು ಗುಣಮುಖರಾಗುತ್ತಿರುವುದರಿಂದ ಆಸ್ಪತ್ರೆಗೆ ಬರುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಂಖ್ಯೆಯೂ ಹೆಚ್ಚುತ್ತಿದೆ ಎಂಬುದು ಕೇಜ್ರಿವಾಲ್ ಅಭಿಪ್ರಾಯ.