ಬೆಂಗಳೂರು : ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಗಲಾಟೆಯಿಂದ ಕೊರೊನಾ 3ನೇ ಹಂತಕ್ಕೆ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಗಲಾಟೆಯಲ್ಲಿ 200ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಗಲಾಟೆ ವೇಳೆ ಮಾಸ್ಕ್ ಹಾಕಿಲ್ಲ, ಸಾಮಾಜಿಕ ಅಂತರವಿಲ್ಲ, ಅಲ್ಲದೇ ಗಲಾಟೆಯಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ಭಾಗಿಯಾಗಿದ್ದರು. ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿದವರು ಗಲಾಟೆಯಲ್ಲಿ ಭಾಗಿಯಾಗಿದ್ದರು.
ಆದಕಾರಣ ಒಬ್ಬರಿಗೆ ಸೋಂಕಿದ್ದರೂ 200 ಜನರಿಗೆ ಹರಡುವ ಸಾಧ್ಯತೆಿದೆ. ಈ ಹಿನ್ನಲೆಯಲ್ಲಿ ಸಮುದಾಯಕ್ಕೆ ಹರಡುವ ಗಲಾಟೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.