Publish Date: Sat, 18 Jul 2020 (08:45 IST)
Updated Date: Sat, 18 Jul 2020 (08:47 IST)
ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಇನ್ನಷ್ಟು ಹೆಚ್ಚುತ್ತಿರುವ ಹಿನ್ನಲೆಯಲ್ಲಿ 14 ದಿನಗಳವರೆಗೆ ಲಾಕ್ ಡೌನ್ ವಿಸ್ತರಿಸಿ ಎಂದು ಬಿಬಿಎಂಪಿ ಒತ್ತಾಯಿಸಿದರೆ ಇತ್ತ ಸಿಎಂ ಬಿಎಸ್ ವೈ ಲಾಕ್ ಡೌನ್ ವಿಸ್ತರಣೆಯಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಒಂದು ವಾರದ ಲಾಕ್ ಡೌನ್ ನಿಂದಾಗಿ ಈಗಾಗಲೇ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ. ಅದರ ಜತೆಗೆ ಜನರೂ ಸರಿಯಾಗಿ ಲಾಕ್ ಡೌನ್ ಪಾಲನೆ ಮಾಡುತ್ತಿಲ್ಲ. ಹೀಗಿರುವಾಗ ಲಾಕ್ ಡೌನ್ ನ ಔಚಿತ್ಯವೇನು ಎಂದು ಹಲವರು ಪ್ರಶ್ನೆ ಮಾಡುತ್ತಿದ್ದಾರೆ.
ಇದರ ನಡುವೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿಎಂ ಬಿಎಸ್ ವೈ ‘ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. ಹೀಗಾಗಿ ಲಾಕ್ ಡೌನ್ ವಿಸ್ತರಣೆ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.