Publish Date: Tue, 05 May 2020 (10:03 IST)
Updated Date: Tue, 05 May 2020 (10:05 IST)
ಬೆಂಗಳೂರು: ತಮ್ಮ ತಮ್ಮ ಊರುಗಳಿಗೆ ತೆರಳಲು ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿರುವ ರಾಜ್ಯ ಸರ್ಕಾರ ಇನ್ನೂ ಎರಡು ದಿನ ಉಚಿತವಾಗಿ ಸೇವೆ ನೀಡಲು ತೀರ್ಮಾನಿಸಿದೆ.
ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಸಂಚರಿಸುವ ಕಾರ್ಮಿಕರ ಸಂಖ್ಯೆ ಅಧಿಕವಾಗಿರುವ ಹಿನ್ನಲೆಯಲ್ಲಿ ಇನ್ನು ಎರಡು ದಿನಗಳಿಗೆ ಉಚಿತ ಸೇವೆಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ.
ಗುರುವಾರದವರೆಗೆ ಉಚಿತ ಬಸ್ ಸೇವೆಯಿದ್ದು, ಕಾರ್ಮಿಕರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಬಸ್ ಜತೆಗೆ ಊರಿಗೆ ತೆರಳು ಕಾರ್ಮಿಕರಿಗೆ ರೈಲು ವ್ಯವಸ್ಥೆಯನ್ನೂ ಮಾಡಲಾಗಿದೆ.