ಬೆಂಗಳೂರು: ಕೊರೋನಾ ವೈರಸ್ ದೇಶಕ್ಕೆ ಕಾಲಿಡುತ್ತಿದ್ದಂತೇ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದರು.
ಕೊರೋನಾ ಸೋಂಕಿತನ ಸೀನು, ಕೆಮ್ಮು ಇತ್ಯಾದಿಗಳು ಇನ್ನೊಬ್ಬರಿಗೆ ಹರಡುವ ಸಾಧ್ಯತೆಯಿದೆ. ಹೀಗಾಗಿ ಒಬ್ಬರಿಗೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಪ್ರಧಾನಿ ಮಾತ್ರವಲ್ಲದೆ, ಆರೋಗ್ಯ ತಜ್ಞರೂ ಸಲಹೆ ನೀಡಿದ್ದರು.
ಈ ಸಲಹೆ ಸಾಕಷ್ಟು ಪರಿಣಾಮಕಾರಿಯಾಗಿದೆ ಎಂದು ತಜ್ಞರು ಹೇಳುತ್ತಾರೆ. ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ ಸುಮಾರು 40 ಕ್ಕೂ ಹೆಚ್ಚು ರಾಷ್ಟ್ರಗಳು ಸಾಮಾಜಿಕ ಅಂತರವನ್ನು ಕಡ್ಡಾಯಗೊಳಿಸಿ ಯಶಸ್ಸು ಕಂಡಿದೆ. ಇದರಿಂದಾಗಿ ಲಕ್ಷಾಂತರ ಮಂದಿ ಕೊರೋನಾ ಅಪಾಯದಿಂದ ಪಾರಾಗಿದ್ದಾರೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದು ಇಂದು ಮಾತ್ರವಲ್ಲ, ಮುಂದಿನ ದಿನಗಳಲ್ಲೂ ಮುಂದುವರಿದರೆ ಆರೋಗ್ಯದ ದೃಷ್ಟಿಯಿಂದ ಉತ್ತಮ ಎನ್ನುವುದು ಅವರ ಅಭಿಪ್ರಾಯ.