Publish Date: Tue, 28 Apr 2020 (10:25 IST)
Updated Date: Tue, 28 Apr 2020 (10:27 IST)
ನವದೆಹಲಿ: ಸುಪ್ರೀಂಕೋರ್ಟ್ ರಿಜಿಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಕೊರೋನಾವೈರಸ್ ಸೋಂಕು ಇರುವುದು ದೃಢಪಟ್ಟಿದೆ.
ಮೊನ್ನೆಯಷ್ಟೇ ರಾಷ್ಟ್ರಪತಿ ಭವನದ ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿದ ವರದಿಯಾಗಿತ್ತು. ಇದೀಗ ಸುಪ್ರೀಂಕೋರ್ಟ್ ಸಿಬ್ಬಂದಿಗೆ ಸೋಂಕು ತಗುಲಿರುವ ವರದಿಯಾಗಿದೆ.
ಇದರಿಂದಾಗಿ ಸಿಬ್ಬಂದಿಯ ಕುಟುಂಬಸ್ಥರನ್ನೂ ಸದ್ಯಕ್ಕೆ ಕ್ವಾರಂಟೈನ್ ನಲ್ಲಿರಿಸಲಾಗಿದೆ. ಅಷ್ಟೇ ಅಲ್ಲದೆ, ಸಿಬ್ಬಂದಿಯ ಸಂಪರ್ಕದಲ್ಲಿದ್ದ ಇತರ ಇಬ್ಬರು ನೌಕರರನ್ನು ಪರೀಕ್ಷೆಗೊಳಪಡಿಸಲಾಗಿದೆ.