ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ರಾಷ್ಟ್ರಪತಿ ಭವನದ ಕಾಂಪ್ಲೆಕ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯ ಸಂಬಂಧಿ ಕೊರೋನಾದಿಂದ ಮೃತಪಟ್ಟಿದ್ದರು. ಆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಮಹಿಳೆಗೂ ಸೋಂಕು ಇರುವುದು ಪತ್ತೆಯಾಗಿದೆ.
ಹೀಗಾಗಿ ಎಲ್ಲಾ 125 ಸಿಬ್ಬಂದಿಗಳನ್ನೂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಅಷ್ಟೇ ಅಲ್ಲದೆ, ರಾಷ್ಟ್ರಪತಿ ಭವನದ ಕಾಂಪ್ಲೆಕ್ಸ್ ನಲ್ಲಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರ ನಿವಾಸಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.