Webdunia - Bharat's app for daily news and videos

Install App

Ajinkya Rehane: ರೆಹಾನೆಗೆ ಟೆಸ್ಟ್ ಕ್ರಿಕೆಟ್ ಬಾಗಿಲೂ ಬಂದ್

Webdunia
ಶನಿವಾರ, 2 ಡಿಸೆಂಬರ್ 2023 (11:49 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಅಜಿಂಕ್ಯಾ ರೆಹಾನೆಗೆ ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಅವಕಾಶ ಸಿಕ್ಕಿಲ್ಲ. ಹೀಗಾಗಿ ಅವರ ಟೆಸ್ಟ್ ಕೆರಿಯರ್ ಕೂಡಾ ಮುಕ್ತಾಯವಾಗುತ್ತಿರುವ ಸೂಚನೆ ಆಯ್ಕೆಗಾರರಿಂದ ಸಿಕ್ಕಿದೆ.

ತಂಡದಲ್ಲಿ ಹೊಸ ಆಟಗಾರರನ್ನು ಬೆಳೆಸುವ ದೃಷ್ಟಿಯಿಂದ ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್ ಮುಂತಾದವರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ.

ಹೀಗಾಗಿ ರೆಹಾನೆ, ಪೂಜಾರ ಮುಂತಾದ ಕ್ರಿಕೆಟಿಗರು ಸದ್ದಿಲ್ಲದೇ ಮರೆಯಾಗುತ್ತಿದ್ದಾರೆ. ಆಪತ್ಕಾಲದಲ್ಲಿ ಟೀಂ ಇಂಡಿಯಾದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದ ರೆಹಾನೆ ಇಂದು ಅವಕಾಶ ವಂಚಿತರಾಗಿದ್ದಾರೆ.

ಕಳೆದ ಐಪಿಎಲ್ ನಲ್ಲಿ ಅವರು ಗಮನಾರ್ಹ ಪ್ರದರ್ಶನ ನೀಡಿದ್ದರು. ಹೀಗಾಗಿ ಒಮ್ಮೆ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಅವಕಾಶ ಪಡೆದಿದ್ದರು. ಆದರೆ ಈಗ ಮತ್ತೆ ಆಫ್ರಿಕಾ ಪ್ರವಾಸಕ್ಕೆ ಹೊಸ ಆಟಗಾರರಿಗೆ ಮಣೆ ಹಾಕಲಾಗಿದ್ದು, ಹಳಬರಾದ ರೆಹಾನೆ ಸಂಪೂರ್ಣ ಮೂಲೆಗುಂಪಾಗಿದ್ದಾರೆ. ಇನ್ನು ಅವರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗುವ ಸಾಧ‍್ಯತೆ ಕಡಿಮೆ. ಹೀಗಾಗಿ ಪ್ರತಿಭಾವಂತ ಆಟಗಾರನ ಅಂತಾರಾಷ್ಟ್ರೀಯ ವೃತ್ತಿ ಜೀವನ ಹೆಚ್ಚು ಕಡಿಮೆ ಇಲ್ಲಿಗೆ ಮುಗಿದಂತೆಯೇ ಸರಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments