Publish Date: Sun, 04 Sep 2022 (19:03 IST)
Updated Date: Sun, 04 Sep 2022 (19:07 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದ ಇಂದಿನ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಪಾಕಿಸ್ತಾನ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಭಾರತ ತಂಡ ಈ ಪಂದ್ಯದಲ್ಲಿ ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಗಾಯಗೊಂಡಿರುವ ರವೀಂದ್ರ ಜಡೇಜಾ ಸ್ಥಾನಕ್ಕೆ ರವಿ ಬಿಷ್ಣೋಯ್, ಜ್ವರದಿಂದ ಬಳಲುತ್ತಿರುವ ಆವೇಶ್ ಖಾನ್ ಬದಲಿಗೆ ದೀಪಕ್ ಹೂಡಾ ಸ್ಥಾನ ಪಡೆದುಕೊಂಡಿದ್ದಾರೆ. ದಿನೇಶ್ ಕಾರ್ತಿಕ್ ರನ್ನು ಹೊರಗಿಡಲಾಗಿದ್ದು ಹಾರ್ದಿಕ್ ಪಾಂಡ್ಯ ಕಮ್ ಬ್ಯಾಕ್ ಮಾಡಿದ್ದಾರೆ. ರಿಷಬ್ ಪಂತ್ ವಿಕೆಟ್ ಕೀಪರ್ ಆಗಿರಲಿದ್ದಾರೆ.
ಅತ್ತ ಪಾಕಿಸ್ತಾನ ತಂಡವೂ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಶಹನ್ವಾಝ್ ದಹಾನಿ ಗಾಯಗೊಂಡಿದ್ದು ಅವರ ಸ್ಥಾನಕ್ಕೆ ಮೊಹಮ್ಮದ್ ಹಸ್ನೈನ್ ಗೆ ಅವಕಾಶ ನೀಡಲಾಗಿದೆ.