Publish Date: Tuesday, 20 September 2022 (18:44 IST)
Updated Date: Tuesday, 20 September 2022 (18:45 IST)
ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ರಿಷಬ್ ಪಂತ್ ಬದಲಿಗೆ ದಿನೇಶ್ ಕಾರ್ತಿಕ್ ರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿದೆ. ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾರನ್ನೂ ಹೊರಗಿಡಲಾಗಿದೆ.
ಉಳಿದಂತೆ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್, ಯಜುವೇಂದ್ರ ಚಾಹಲ್ ಗೆ ಸ್ಥಾನ ನೀಡಲಾಗಿದೆ.