ಮುಂಬೈ: ಟೀಂ ಇಂಡಿಯಾ ಆಟಗಾರರ ವೇತನ ಹೆಚ್ಚಿಸಬೇಕೆಂದು ನಾಯಕ ವಿರಾಟ್ ಕೊಹ್ಲಿ ಬೇಡಿಕೆಗೆ ಬಿಸಿಸಿಐ ಆಡಳಿತ ಸಮಿತಿ ಹಸಿರು ನಿಶಾನೆ ತೋರಿದೆ.
ಇದಕ್ಕೂ ಮೊದಲು ಟೀಂ ಇಂಡಿಯಾ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಬಿಸಿಸಿಐ ಸಮಿತಿ ಎದುರು ಎ ಗ್ರೇಡ್ ಆಟಗಾರರ ವೇತನವನ್ನು ವಾರ್ಷಿಕ 1 ಕೋಟಿ ರೂ. ನಿಂದ 5 ಕೋಟಿ ರೂ.ಗೆ ಹೆಚ್ಚಿಸಬೇಕೆಂದು ವಾದ ಮಂಡಿಸಿದ್ದರು.
ವಿರಾಟ್ ಕೊಹ್ಲಿ ಕೂಡಾ ಇತ್ತೀಚೆಗೆ ಆಟಗಾರರ ವೇತನ ಹೆಚ್ಚಿಸಲು ಬೇಡಿಕೆ ಮುಂದಿಟ್ಟಿದ್ದರು. ಇದೀಗ ಆಟಗಾರರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಕಾರ್ಯಕಾರಿ ಸಮಿತಿ ಈ ನಿಟ್ಟಿನಲ್ಲಿ ಗಮನ ಹರಿಸುವುದಾಗಿ ಹೇಳಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ