ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 303 ರನ್ ಗಳಿಸಿದೆ.
18 ನೇ ಟೆಸ್ಟ್ ಶತಕ ದಾಖಲಿಸಿದ ಚೇತೇಶ್ವರ ಪೂಜಾರ ಹೊಸ ದಾಖಲೆ ಮಾಡಿದ್ದಾರೆ. ಈ ಸರಣಿಯಲ್ಲಿ ಅದ್ಭುತ ಫಾರ್ಮ್ ಪ್ರದರ್ಶಸಿರುವ ಪೂಜಾರ ಇದುವರೆಗೆ 3 ಶತಕ ದಾಖಲಿಸಿದ್ದಾರೆ. ಈ ಮೂಲಕ 3 ನೇ ಕ್ರಮಾಂಕದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಕ್ರಿಕೆಟಿಗನೊಬ್ಬ ಒಂದೇ ಸರಣಿಯಲ್ಲಿ ಅತೀ ಹೆಚ್ಚು ಶತಕ ದಾಖಲಿಸಿದ ದಾಖಲೆ ಮಾಡಿದ್ದಾರೆ.
ಪೂಜಾರ ಜತೆಗೆ ಇಂದು ಕೆಳಕ್ರಮಾಂಕದಲ್ಲಿ ಆಡಲಿಳಿದ ಹನುಮ ವಿಹಾರಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು 39 ರನ್ ಗಳಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಪೂಜಾರ 130 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದಕ್ಕೂ ಮೊದಲು ನಾಯಕ ವಿರಾಟ್ ಕೊಹ್ಲಿ (23) ಮತ್ತು ಉಪನಾಯಕ ಅಜಿಂಕ್ಯಾ ರೆಹಾನೆ (18) ಬೇಗನೇ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ