Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಿಡ್ನಿ: ಬಾಲ್ ವಿರೂಪ ಪ್ರಕರಣದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ ಹಾಕಿಸಿಕೊಂಡು, ಒಂದು ವರ್ಷ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಪತ್ರಿಕಾಗೋಷ್ಟಿಯಲ್ಲಿ ಕಂಬನಿ ಮಿಡಿದು ಕ್ಷಮೆ ಯಾಚಿಸಿದ್ದಾರೆ.
ಕ್ಷಮಿಸಿ ಎಲ್ಲರೂ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದೇವೆ. ಇನ್ಯಾವತ್ತೂ ದೇಶದ ಪರ ಆಡಲ್ಲ ಎಂದು ವಾರ್ನರ್ ಕಣ್ಣೀರು ಸುರಿಸುತ್ತಾ ಕ್ಷಮೆ ಯಾಚಿಸಿದ್ದಾರೆ. ಈ ತಪ್ಪನ್ನು ಜೀವಮಾನ ಪೂರ್ತಿ ಮರೆಯಲ್ಲ ಎಂದು ಅವರು ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.
‘ಈ ತಪ್ಪಿನ ಸಂಪೂರ್ಣ ಜವಾಬ್ದಾರಿಯನ್ನು ನಾನು ಹೊರುತ್ತೇನೆ. ಆಸ್ಟ್ರೇಲಿಯಾ ತಂಡದ ಉಪನಾಯಕನಾಗಿ ನನ್ನ ಕರ್ತವ್ಯದಲ್ಲಿ ಸಂಪೂರ್ಣ ವಿಫಲನಾಗಿದ್ದೇನೆ’ ಎಂದು ವಾರ್ನರ್ ಹೇಳಿಕೊಂಡಿದ್ದಾರೆ. ಇದಕ್ಕೂ ಮೊದಲು ಆಸ್ಟ್ರೇಲಿಯಾ ನಾಯಕರಾಗಿದ್ದ ಸ್ಟೀವ್ ಸ್ಮಿತ್ ಕೂಡಾ ಪತ್ರಿಕಾಗೋಷ್ಠಿಯಲ್ಲಿ ಅಳುತ್ತಾ ತಮ್ಮ ಕ್ಷಮೆ ಯಾಚಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ