Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಂಚಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಐಪಿಎಲ್ 2023 ಕ್ಕೆ ಈಗಿಂದಲೇ ಅಭ್ಯಾಸ ಆರಂಭಿಸಿದ್ದಾರೆ.
ಐಪಿಎಲ್ ಗೆ ಇನ್ನೂ ಎರಡು ತಿಂಗಳು ಬಾಕಿಯಿದ್ದು, ಧೋನಿ ಈಗಿಂದಲೇ ಪ್ಯಾಡ್ ಕಟ್ಟಿಕೊಂಡು ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ.
ರಾಂಚಿಯ ಮೈದಾನದಲ್ಲಿ ಧೋನಿ ಅಭ್ಯಾಸ ನಡೆಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಮ್ಮ ನೆಚ್ಚಿನ ನಾಯಕ ಮತ್ತೆ ಕ್ರಿಕೆಟ್ ಗೆ ಮರಳುವುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.