Publish Date: Fri, 02 Jun 2023 (08:10 IST)
Updated Date: Fri, 02 Jun 2023 (08:32 IST)
ಚೆನ್ನೈ: ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿಗೆ ಈಗ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.
ಐಪಿಎಲ್ 2023 ರ ವೇಳೆ ಧೋನಿ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು. ನೋವಿನ ನಡುವೆಯೂ ಅವರು ಪಂದ್ಯಗಳಲ್ಲಿ ಆಡಲಿಳಿಯುತ್ತಿದ್ದರು. ಅದರಲ್ಲೂ 41 ನೇ ವಯಸ್ಸಿನಲ್ಲೂ ನೋವಿದ್ದರೂ ವಿಕೆಟ್ ಕೀಪಿಂಗ್ ಮಾಡುತ್ತಿದ್ದುದು ವಿಶೇಷ. ಅಭಿಮಾನಿಗಳ ಅಭಿಮಾನಕ್ಕೆ ತಲೆಬಾಗಿ ಧೋನಿ ಇನ್ನೊಂದು ವರ್ಷ ಐಪಿಎಲ್ ಆಡುವ ಇಂಗಿತ ವ್ಯಕ್ತಪಡಿಸಿದ್ದರು.
ಆದರೆ ಮೊಣಕಾಲಿನ ಗಾಯ ಗಂಭೀರವಾಗಿತ್ತು. ಹೀಗಾಗಿ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ರಸ್ತೆ ಅಪಘಾತಕ್ಕೀಡಾಗಿ ಕಾಲು ಮುರಿದುಕೊಂಡಿದ್ದ ರಿಷಬ್ ಪಂತ್ ಗೆ ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯರೇ ಧೋನಿಗೂ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎನ್ನಲಾಗಿದೆ.