Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೈದರಾಬಾದ್: ಇತ್ತೀಚೆಗೆ ನಡೆದ ಏಕದಿನ ವಿಶ್ವಕಪ್ ಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ರನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿದ್ದಾರೆ.
ವಿಶ್ವಕಪ್ ಕೂಟ ಮುಗಿಸಿ ತವರಿಗೆ ಬಂದಿಳಿದ ಮೊಹಮ್ಮದ್ ಸಿರಾಜ್ ರನ್ನು ವಿದೇಶಾಂಗ ಸಚಿವೆ ನಿರ್ಮಲಾ ಸೀತಾರಾಮನ್ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ.
ಈ ವೇಳೆ ಭಾರತ ತಂಡ ಮತ್ತು ಸಿರಾಜ್ ಅದ್ಭುತ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಅಲ್ಲದೆ, ವಿಶ್ವಕಪ್ ಫೈನಲ್ ಸೋಲಿಗೆ ಧೃತಿಗೆಡದಂತೆ ಸ್ಥೈರ್ಯ ತುಂಬಿದ್ದಾರೆ. ಅಲ್ಲದೆ ಮುಂದಿನ ಟೂರ್ನಿಗಳಿಗೂ ಶುಭ ಹಾರೈಸಿದ್ದಾರೆ.
ವಿಶ್ವಕಪ್ ಫೈನಲ್ ಸೋಲಿನ ಬಳಿಕ ಪ್ರಧಾನಿ ಮೋದಿ ಭಾರತೀಯ ಡ್ರೆಸ್ಸಿಂಗ್ ರೂಂಗೆ ತೆರಳಿ ಆಟಗಾರರಿಗೆ ಉತ್ಸಾಹ ತುಂಬುವ ಕೆಲಸ ಮಾಡಿದ್ದರು. ಹಲವು ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾ ಮೂಲಕ ಟೀಂ ಇಂಡಿಯಾಗೆ ಬೆಂಬಲ ಸೂಚಿಸಿದ್ದರು.