Publish Date: Wed, 27 Oct 2021 (11:39 IST)
Updated Date: Wed, 27 Oct 2021 (09:40 IST)
ದುಬೈ: ಪಾಕಿಸ್ತಾನ ವಿರುದ್ಧ ಟಿ20 ವಿಶ್ವಕಪ್ ಪಂದ್ಯದಲ್ಲಿ ಬ್ಯಾಟಿಂಗ್ ವೇಳೆ ಭುಜಕ್ಕೆ ಗಾಯಮಾಡಿಕೊಂಡಿರುವ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ತಕ್ಷಣವೇ ಮುನ್ನೆಚ್ಚರಿಕೆ ಕ್ರಮವಾಗಿ ಹಾರ್ದಿಕ್ ರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಅವರ ಗಾಯ ಗಂಭೀರವಲ್ಲ ಎಂದು ತಿಳಿದುಬಂದಿದೆ.
ಹಾಗಿದ್ದರೂ ಅವರ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಪಂದ್ಯಕ್ಕೆ ಲಭ್ಯತೆ ಕುರಿತು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನಿರ್ಧರಿಸಲಿದೆ. ಒಂದು ವೇಳೆ ಅವರು ಲಭ್ಯರಲ್ಲದೇ ಹೋದಡೆ ಇಶಾನ್ ಕಿಶನ್ ಗೆ ಸ್ಥಾನ ನೀಡುವ ಸಾಧ‍್ಯತೆಯಿದೆ.