ದುಬೈ: ಟೀಂ ಇಂಡಿಯಾ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ಆಡಿದ್ದ ಮೂರು ಟೆಸ್ಟ್ ಪಂದ್ಯಗಳಲ್ಲಿ ಪಿಚ್ ಫಿಕ್ಸಿಂಗ್ ನಡೆದಿತ್ತು ಎಂದು ಆರೋಪಿಸಿದ್ದ ದುಬೈ ಮೂಲದ ಅಲ್ ಜಜೀರಾ ಟಿವಿ ವಾಹಿನಿಗೆ ಸಾಕ್ಷ್ಯ ಒದಗಿಸುವಂತೆ ಐಸಿಸಿ ಕರೆ ನೀಡಿದೆ.
‘ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸುತ್ತೇವೆ. ಯಾರೇ ಆಗಿರಲಿ, ತಪ್ಪಿತಸ್ಥರು ಎಂದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಆದರೆ ಇದಕ್ಕೆ ಪೂರಕವಾದ ಸಾಕ್ಷ್ಯ ನಮಗೆ ಬೇಕು. ಅದನ್ನು ಅಲ್ ಜಜೀರಾ ನೀಡಬೇಕು’ ಎಂದು ಐಸಿಸಿ ಸಿಇಒ ಡೇವಿಡ್ ರಿಚರ್ಡ್ ಸನ್ ಹೇಳಿದ್ದಾರೆ.
ಭಾರತ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ, ಆಸ್ಟ್ರೇಲಿಯಾ ವಿರುದ್ಧ ರಾಂಚಿಯಲ್ಲಿ ಮತ್ತು ಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ಆಡಿದ್ದ ಟೆಸ್ಟ್ ಪಂದ್ಯಗಳಲ್ಲಿ ಪಿಚ್ ಕ್ಯುರೇಟರ್ ಗಳು ಪಿಚ್ ತಿರುಚಿದ್ದರು. ಈ ಪಂದ್ಯಗಳಲ್ಲಿ ಪಿಚ್ ಫಿಕ್ಸಿಂಗ್ ನಡೆದಿತ್ತು ಎಂದು ರಹಸ್ಯ ಕಾರ್ಯಾಚರಣೆ ಮೂಲಕ ಅಲ್ ಜಜೀರಾ ವರದಿ ಮಾಡಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.