Webdunia - Bharat's app for daily news and videos

Install App

ICC Champions Trophy: ಹಲವು ದಾಖಲೆಯೊಂದಿಗೆ ಆಂಗ್ಲರ ವಿರುದ್ಧ ಸವಾರಿ ಮಾಡಿದ ಕಾಂಗರೂ ಪಡೆ

Sampriya
ಭಾನುವಾರ, 23 ಫೆಬ್ರವರಿ 2025 (09:09 IST)
Photo Courtesy X
ಲಾಹೋರ್‌: ಆಸ್ಟ್ರೇಲಿಯ ತಂಡವು ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಶನಿವಾರ ಇಂಗ್ಲೆಂಗ್‌ ತಂಡವನ್ನು ಮಣಿಸುವ ಜೊತೆಗೆ ಸಾಲು ಸಾಲು ದಾಖಲೆಗಳನ್ನು ಬರೆದಿದೆ.

ಆಸ್ಟ್ರೇಲಿಯಾ ತಂಡವು ಬಿ ಗುಂಪಿನ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ, ಟೂರ್ನಿಯಲ್ಲಿ ಶುಭಾರಂಭವನ್ನು ಮಾಡಿತು.

ಮೊದಲು ಬ್ಯಾಟ್‌ ಮಾಡಿದ್ದ ಇಂಗ್ಲೆಂಡ್ ತಂಡವು ಬೆನ್‌ ಡಕೆಟ್‌ (165;143ಎ) ಅವರ ಭರ್ಜರಿ ಶತಕಗಳ ನೆರವಿನಿಂದ  8 ವಿಕೆಟ್‌ಗೆ 351 ರರ್‌ಗಳ ಬೃಹತ್‌ ಮೊತ್ತವನ್ನು ಗಳಿಸಿತು. ಇದು ಚಾಂಪಿಯನ್ಸ್‌ ಟ್ರೋಫಿ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ದಾಖಲಿಸಿತ್ತು.

ಆದರೆ, ಈ ಗುರಿಯನ್ನು ಇನ್ನೂ 15 ಎಸೆತ ಬಾಕಿ ಇರುವಂತೆ ಕಾಂಗರೂ ಪಡೆ 5 ವಿಕೆಟ್‌ಗೆ 356 ರನ್‌ ಗಳಿಸಿ ಜಯಭೇರಿ ಬಾರಿಸಿತು. ಈ ಟೂರ್ನಿ ಮಾತ್ರವಲ್ಲ, ಐಸಿಸಿಯ ಯಾವುದೇ ಟೂರ್ನಿಯಲ್ಲಿ ಮೊತ್ತ ಚೇಸಿಂಗ್‌ನ ದಾಖಲೆ ಇದಾಯಿತು.

ಆಸ್ಟ್ರೇಲಿಯಾದ ಜೋಷ್‌ ಇಂಗ್ಲೆಂಡ್‌ (ಅಜೇಯ 120, 86ಎ) ಅವರು ಗೆಲುವಿನ ರೂವಾರಿಯಾದರು. ವೇಗದ ಬೌಲರ್‌ ಮಾರ್ಕ್‌ ವುಡ್‌ ಬೌಲಿಂಗ್‌ನಲ್ಲಿ ಸಿಕ್ಸರ್ ಎತ್ತಿ ಗೆಲುವಿನ ರನ್ ಹೊಡೆದರು. ಅವರ ಆಟದಲ್ಲಿ ಎಂಟು ಬೌಂಡರಿಗಳ ಜೊತೆ ಆರು ಸಿಕ್ಸರ್‌ಗಳಿದ್ದವು.

ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌, ಜೋಶ್‌ ಹ್ಯಾಜಲ್‌ವುಡ್‌ ಸೇರಿದಂತೆ ಪ್ರಮುಖ ಬೌಲರ್‌ಗಳ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿರುವ ಆಸ್ಟ್ರೇಲಿಯಾಕ್ಕೆ ಬ್ಯಾಟರ್‌ಗಳು ಶಕ್ತಿ ತುಂಬಿದರು.

 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments