Select Your Language

Notifications

webdunia
webdunia
webdunia
webdunia

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್

IND vs ENG
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಈಗಾಗಲೇ ಸತತ ಎರಡು ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಈಗ ಏಕದಿನ ಪಂದ್ಯದಲ್ಲಿ ಗೆಲುವಿನ ಭರವಸೆಯಲ್ಲಿದೆ. ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾರಂತಹ ಸ್ಟಾರ್ ಆಟಗಾರರು ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.

ಬರ್ಮಿಂಗ್ ಹ್ಯಾಮ್ ನಲ್ಲಿ ವೇಗದ ಬೌಲರ್ ಗಳಿಗೆ ಸಹಾಯವಾಗುವ ಸಾಧ್ಯತೆಯಿದೆ. ಹೀಗಾಗಿ ಮೊದಲು ಬೌಲಿಂಗ್ ಮಾಡಿದಲ್ಲಿ ವೇಗದ ಬೌಲರ್ ಗಳು ಬೇಗ ವಿಕೆಟ್ ಪಡೆಯುವ ಪ್ರಯತ್ನ ನಡೆಸಬೇಕಿದೆ.

ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ  ಆಡುವ ಬಳಗ ಹೀಗಿದೆ:
ಶುಭಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಶಿವಂ ದುಬೆ, ಗುರ್ನೂರು ಬ್ರಾರ್, ಪ್ರಸಿದ್ಧ ಕೃಷ್ಣ.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್ ಕೊಹ್ಲಿ, ಗಂಭೀರ್ ನಡುವೆ ನೇರ ಮಾತುಕತೆ ಇಲ್ವಾ: ನೆಟ್ ಸೆಷನ್ ವೇಳೆ ಅಂತಹ್ದೇನಾಯ್ತು Video