Webdunia - Bharat's app for daily news and videos

Install App

IND vs NZ Test: ವಿಕೆಟ್ ಬಿದ್ದ ಬೇಸರದಲ್ಲಿ ಬ್ಯಾಟ್ ಕೆಳಗಿಟ್ಟು ಬೇಸರದಲ್ಲಿ ಕೂತ ವಿರಾಟ್ ಕೊಹ್ಲಿ ವಿಡಿಯೋ

Krishnaveni K
ಶುಕ್ರವಾರ, 25 ಅಕ್ಟೋಬರ್ 2024 (11:43 IST)
Photo Credit: X
ಪುಣೆ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮತ್ತೊಮ್ಮೆ ಭಾರತದ ಬ್ಯಾಟಿಂಗ್ ಕೈ ಕೊಟ್ಟಿದೆ. ರೋಹಿತ್ ಶರ್ಮಾ ಬಳಿಕ ವಿರಾಟ್ ಕೊಹ್ಲಿ ಕೂಡಾ ಜುಜುಬಿ ಮೊತ್ತಕ್ಕೆ ಔಟಾಗಿದ್ದಾರೆ.

ಭಾರತ ಇತ್ತೀಚೆಗಿನ ವರದಿ ಬಂದಾಗ ಭಾರತ 7 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದೆ. ಮೊದಲ ಪಂದ್ಯದ ಮೊದಲ ಇನಿಂಗ್ಸ್ ನಂತೆ ಇಲ್ಲಿಯೂ ಬ್ಯಾಟಿಗರು ಸಂಪೂರ್ಣ ವೈಫಲ್ಯ ಅನುಭವಿಸಿದ್ದಾರೆ. ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರೆ, ವಿರಾಟ್ ಕೊಹ್ಲಿ 1 ರನ್ ಗೆ ವಿಕೆಟ್ ಒಪ್ಪಿಸಿದ್ದಾರೆ.

ಸ್ಯಾಂಟ್ನರ್ ಎಸೆತದಲ್ಲಿ ಬೌಲ್ಡ್ ಆದ ವಿರಾಟ್ ಕೊಹ್ಲಿ ತೀವ್ರ ಆಘಾತಕ್ಕೊಳಗಾದರು. ಬ್ಯಾಟ್ ಕೆಳಗೆ ಹಾಕಿ ತಲೆ ತಗ್ಗಿಸಿ ಬೇಸರದಲ್ಲಿ ಅರೆಕ್ಷಣ ಕೂತರು. ಬಳಿಕ ನಿರಾಸೆಯಿಂದ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಅವರ ಈ ಪರಿಸ್ಥಿತಿ ನೋಡಿ ಅಭಿಮಾನಿಗಳೂ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ್ದಾರೆ.

ವಿರಾಟ್ ಕೊಹ್ಲಿ ಇತ್ತೀಚೆಗಿನ ದಿನಗಳಲ್ಲಿ ತಮ್ಮ ಎಂದಿನ ಅಬ್ಬರದ ಇನಿಂಗ್ಸ್ ಆಡಿದ್ದೇ ಇಲ್ಲ. ಅದರಲ್ಲೂ ಶತಕ ಸಿಡಿಸಿ ಕೆಲವು ಸಮಯವೇ ಕಳೆದಿದೆ.  ಇಂದು ಮತ್ತೊಮ್ಮೆ ಅವರು ವೈಫಲ್ಯಕ್ಕೊಳಗಾಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಅವರು ಔಟ್ ಆದ ಕ್ಷಣದ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments