Publish Date: Tue, 08 Dec 2020 (09:10 IST)
Updated Date: Tue, 08 Dec 2020 (09:11 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ಅಂತಿಮ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ ಸರಣಿ ಭಾರತ ಗೆದ್ದಿರುವುದದರಿಂದ ಈ ಪಂದ್ಯ ಔಪಚಾರಿಕವಾಗಲಿದೆ.
ಆದರೆ ಭಾರತ ಇಂದಿನ ಪಂದ್ಯವನ್ನು ಗೆದ್ದರೆ ಸರಣಿ ಕ್ಲೀನ್ ಸ್ವೀಪ್ ಮಾಡಿದ ಗೌರವಕ್ಕೆ ಪಾತ್ರವಾಗಲಿದೆ. ಇಂದಿನ ಪಂದ್ಯದಲ್ಲಿ ಪ್ರಮುಖರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅತ್ತ ಆಸ್ಟ್ರೇಲಿಯಾ ನಾಯಕ ಏರಾನ್ ಫಿಂಚ್ ಗಾಯದಿಂದ ಚೇತರಿಸಿಕೊಳ್ಳದೇ ಇರುವ ಕಾರಣ ಇಂದಿನ ಪಂದ್ಯದಲ್ಲೂ ಆಡುವುದು ಅನುಮಾನ. ಇಂದಿನ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.40 ಕ್ಕೆ ಆರಂಭವಾಗಲಿದೆ.