Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದೆ.
ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಎಲ್ಲಾ ವಿಭಾಗದಲ್ಲಿ ಪ್ರಚಂಡ ಪ್ರದರ್ಶನ ನೀಡಿದ್ದರು. ಅದರಲ್ಲೂ ಅನುಭವಿ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಬೌಲಿಂಗ್ ನಲ್ಲಿ ಮಿಂಚಿದರೆ ಹಳೆಯ ಆರಂಭಿಕ ಜೋಡಿ ರೋಹಿತ್ ಶರ್ಮಾ-ಶಿಖರ್ ಧವನ್ ಬ್ಯಾಟಿಂಗ್ ನಲ್ಲಿ ಮಿಂಚಿದ್ದರು.
ಇಂಗ್ಲೆಂಡ್ ನ ಪಿಚ್ ಗಳಲ್ಲಿ ಟಾಸ್ ನಿರ್ಣಾಯಕ ಪಾತ್ರ ವಹಿಸುತ್ತದೆ. ಇದಕ್ಕೆ ಕಳೆದ ಪಂದ್ಯವೇ ಸಾಕ್ಷಿ. ಇಲ್ಲಿನ ಹಸಿರು ಪಿಚ್ ಗಳಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿದರೆ ಗೆಲ್ಲುವ ಅವಕಾಶ ಹೆಚ್ಚು. ಹೀಗಾಗಿ ಇಂದಿನ ಪಂದ್ಯದಲ್ಲಿ ರೋಹಿತ್ ಟಾಸ್ ಗೆದ್ದರೆ ಅರ್ಧ ಪಂದ್ಯ ಗೆದ್ದಂತೆಯೇ ಸರಿ. ಆದರೆ ಘಟಾನುಘಟಿ ಆಟಗಾರರನ್ನು ಹೊಂದಿರುವ ಅತಿಥೇಯರು ಯಾವುದೇ ಕ್ಷಣದಲ್ಲಿ ತಿರುಗಿಬೀಳಬಹುದು. ಹೀಗಾಗಿ ಟೀಂ ಇಂಡಿಯಾ ಎಚ್ಚರ ತಪ್ಪುವಂತಿಲ್ಲ. ಇಂದಿನ ಪಂದ್ಯಕ್ಕೆ ರೋಹಿತ್ ಪಡೆಯಲ್ಲಿ ಯಾವುದೇ ಬದಲಾವಣೆಯಾಗುವ ಸಾಧ‍್ಯತೆಯಿಲ್ಲ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 5.30 ಕ್ಕೆ ಆರಂಭವಾಗಲಿದೆ.