Publish Date: Sat, 16 Jul 2022 (20:10 IST)
Updated Date: Sat, 16 Jul 2022 (20:17 IST)
ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಳೆ ನಿರ್ಣಾಯಕ ಮತ್ತು ಅಂತಿಮ ಏಕದಿನ ಪಂದ್ಯ ಮ್ಯಾಂಚೆಸ್ಟರ್ ನಲ್ಲಿ ನಡೆಯಲಿದೆ.
ಮೂರು ಪಂದ್ಯಗಳ ಸರಣಿಯಿಂದ 1-1 ರಿಂದ ಸಮಬಲಗೊಂಡಿದೆ. ಹೀಗಾಗಿ ಎರಡೂ ತಂಡಗಳಿಗೆ ಸರಣಿ ಗೆಲ್ಲಲು ಸಮಾನ ಅವಕಾಶವಿದೆ.
ಕಳೆದ ಎರಡೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಕೈಕೊಟ್ಟಿದ್ದರಿಂದ ಸೋಲಾಯಿತು. ಅಗ್ರ ಕ್ರಮಾಂಕದ ಬ್ಯಾಟಿಗರು ಖ್ಯಾತಿಗೆ ತಕ್ಕ ಪ್ರದರ್ಶನ ನೀಡಬೇಕಾಗುತ್ತದೆ. ಇಲ್ಲದೇ ಹೋದರೆ ಸರಣಿ ಗೆಲ್ಲಲು ಕಷ್ಟವಾಗಲಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.