Publish Date: Thu, 02 Sep 2021 (08:56 IST)
Updated Date: Thu, 02 Sep 2021 (09:01 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಇಂದಿನಿಂದ ಇಂಗ್ಲೆಂಡ್ ನ ದಿ ಓವಲ್ ಮೈದಾನದಲ್ಲಿ ಆರಂಭವಾಗಲಿದೆ.
ಈಗಾಗಲೇ ಸರಣಿಯಲ್ಲಿ ಎರಡೂ ತಂಡಗಳು ಒಂದು ಡ್ರಾ, ತಲಾ ಒಂದು ಗೆಲುವಿನೊಂದಿಗೆ ಸರಣಿ ಸಮಬಲಗೊಳಿಸಿವೆ. ಎರಡನೇ ಪಂದ್ಯವನ್ನು ಭಾರತ ಗೆದ್ದಿದ್ದರೆ, ಮೂರನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತ್ತು.
ಹೀಗಾಗಿ ಈ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಸಣ್ಣ ಮಟ್ಟಿಗಿನ ಬದಲಾವಣೆ ನಿರೀಕ್ಷಿಸಬಹುದು. ಬ್ಯಾಟಿಂಗ್ ನಲ್ಲಿ ಅಂತಹ ಬದಲಾವಣೆಯಿರದು. ಆದರೆ ಬೌಲಿಂಗ್ ವಿಭಾಗದಲ್ಲಿ ಜಡೇಜಾ ಅಥವಾ ಇಶಾಂತ್ ಶರ್ಮಾ ಬದಲಿಗೆ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಅತ್ತ ಇಂಗ್ಲೆಂಡ್ ಕೂಡಾ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಬಗ್ಗೆ ಚಿಂತನೆ ನಡೆಸಿದೆ. ಇಂದಿನ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.